ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ನ್ಯಾಯಯುತ ತನಿಖೆಗೆ‌ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೂಚನೆ

Pralhad Joshi: ‌ಧಾರವಾಡಕ್ಕೆ ಓದಲು ಬಂದಿದ್ದ ಬಾಗಲಕೋಟೆ ಮೂಲದ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಅತ್ಯಂತ ನೋವಿನ ಸಂಗತಿ ಎಂದು ತೀವ್ರ ಬೇಸರ ವ್ಯಕ್ತಪಡಿಸಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ, ಈ ಪ್ರಕರಣದ ಬಗ್ಗೆ ಶೀಘ್ರವೇ ನ್ಯಾಯಯುತ ತನಿಖೆ ನಡೆಸುವಂತೆ ಪೊಲೀಸ್ ಆಯುಕ್ತರಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದಾರೆ.

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ನ್ಯಾಯಯುತ ತನಿಖೆಗೆ‌ ಜೋಶಿ ಸೂಚನೆ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (ಸಂಗ್ರಹ ಚಿತ್ರ) -

Profile
Siddalinga Swamy Apr 29, 2026 3:09 PM

ನವದೆಹಲಿ, ಏ.29: ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಡೆಸುವುದಾಗಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಎಚ್ಚರಿಸಿದ್ದಾರೆ. ಧಾರವಾಡಕ್ಕೆ ಓದಲು ಬಂದಿದ್ದ ಬಾಗಲಕೋಟೆ ಮೂಲದ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಅತ್ಯಂತ ನೋವಿನ ಸಂಗತಿ ಎಂದು ತೀವ್ರ ಬೇಸರ ವ್ಯಕ್ತಪಡಿಸಿರುವ ಸಚಿವರು, ಅಮಾಯಕ ವಿದ್ಯಾರ್ಥಿಯನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಶೀಘ್ರವೇ ನ್ಯಾಯಯುತ ತನಿಖೆ ನಡೆಸುವಂತೆ ಹಾಗೂ ಪ್ರಕರಣದಲ್ಲಿ ಭಾಗಿಯಾದ ತಪ್ಪಿತಸ್ಥ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿಯನ್ನು ಕೂಡಲೇ ಅಮಾನತುಗೊಳಿಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತರಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದಾರೆ.‌

ಬಾಂಬರ್ಸ್‌ನ ʼಬ್ರದರ್ಸ್ʼ ಅನ್ನೋ ಪಕ್ಷವನ್ನು ಭಾರತ ಸ್ವೀಕರಿಸದು: ಜೋಶಿ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟಿದ್ದು, ರಾಜ್ಯ ಸರ್ಕಾರ ಇಡೀ ಪ್ರಕರಣದ ನೈತಿಕ ಹೊಣೆ ಹೊರಬೇಕು ಮತ್ತು ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.