ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ; ಚಾಕೋಲೆಟ್ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ!

Murder Case: ಹುಬ್ಬಳ್ಳಿ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಪೈಶಾಚಿಕ ಘಟನೆ ನಡೆದಿದೆ. ಬಿಹಾರ ಮೂಲದ ಯುವಕನಿಂದ ಕೃತ್ಯ ನಡೆದಿದೆ. ಬಾಲಕಿ ಪೋಷಕರು ಪೊಲೀಸ್‌ ಠಾಣೆಗೆ ತೆರಳಿ, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಇದರಿಂದ ಪೊಲೀಸ್ ಠಾಣೆ ಬಳಿ‌ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ.

ಚಾಕೋಲೆಟ್ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ!

Profile Prabhakara R Apr 13, 2025 3:54 PM

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಚಾಕೋಲೆಟ್ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆ (Murder Case) ಹುಬ್ಬಳ್ಳಿಯಲ್ಲಿ ನಡೆದಿದೆ. ಮಗುವಿನ ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಾಗ ಮಗು ಮನೆಯ ಹೊರಗೆ ಆಟವಾಡುತ್ತಿದ್ದಳು. ಈ ವೇಳೆ ಆರೋಪಿ ಗೇಟ್ ತೆರೆದು ಒಳ ನುಗ್ಗಿ ಬಾಲಕಿಗೆ ಚಾಕೋಲೆಟ್ ಆಸೆ ತೋರಿಸಿ ಹೊತ್ತೊಯ್ದಿದ್ದಾನೆ. ಬಳಿಕ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಆರೋಪಿ ಮನೆಯ ಬಳಿ ಬರುತ್ತಿರುವ ಹಾಗೂ ಬಾಲಕಿಯನ್ನು ಹೊತ್ತೊಯ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಿಹಾರ ಮೂಲದ ಯುವಕನಿಂದ ಕೃತ್ಯ ನಡೆದಿದೆ ಎನ್ನಲಾಗಿದೆ. ಹುಬ್ಬಳ್ಳಿ ಅಶೋಕನಗರ ಠಾಣೆಗೆ ನುಗ್ಗಿರುವ ಬಾಲಕಿ ಪೋಷಕರು ಹಾಗೂ ಸಾರ್ವಜನಿಕರು, ಆರೋಪಿಯನ್ನು ಬಂಧಿಸಿ ತಮಗೊಪ್ಪಿಸುವಂತೆ ಪಟ್ಟು ಹಿಡಿದಿದ್ದಾರೆ, ಪೊಲೀಸ್ ಠಾಣೆ ಎದಿರು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಈ ಸುದ್ದಿಯನ್ನೂ ಓದಿ | Terrorist Arrest: ಪಂಜಾಬ್‌ನಲ್ಲಿ ಇಬ್ಬರು ಭಯೋತ್ಪಾದಕರ ಬಂಧನ; ಆರ್‌ಡಿಎಕ್ಸ್, ಐಇಡಿ ವಶಕ್ಕೆ

ಬೆಳಗಾವಿಯ ಹಾಸ್ಟೆಲ್‌ನಲ್ಲಿ ಬಿಸಿಎ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಳಗಾವಿ: ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ನಡೆದಿದೆ. ಶಿಲ್ಪಾ ಯರಮಸನಾಳ (20) ಆತ್ಮಹತ್ಯೆ (Self Harming) ಮಾಡಿಕೊಂಡ ಯುವತಿ.‌ ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ವಿದ್ಯಾರ್ಥಿನಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಹಾಸ್ಟೆಲ್‌ನ ಐದನೇ ಕೊಠಡಿಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.‌

ಈ ಸುದ್ದಿಯನ್ನೂ ಓದಿ | West Bengal Violence: ಪಶ್ಚಿಮ ಬಂಗಾಳದಲ್ಲಿ ಭಾರೀ ಹಿಂಸಾಚಾರ; ರೈಲಿಗೆ ಕಲ್ಲು ತೂರಾಟ- ಕಚ್ಚಾ ಬಾಂಬ್‌ ಎಸೆದು ಅಟ್ಟಹಾಸ

Road Accident: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು

ಮಂಗಳೂರು: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ(Road Accident) ಸಂಭವಿಸಿದೆ. ದಕ್ಷಿಣಕನ್ನಡದ ಬೆಳ್ತಂಗಡಿಯಲ್ಲಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಪುರುಷಗಡ್ಡೆಯಲ್ಲಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಶಾಂತ್ ಹಾಗೂ ಬೆಳ್ಮನೆ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದ್ದು, ಅತಿ ವೇಗದ ಚಾಲನೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲವು ದಿನಗಳ ಹಿಂದೆಯಷ್ಟೇ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಯಲ್ಲಿ ಐರಾವತ ಬಸ್ ಮತ್ತು ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ (Road Accident) ಸಂಭವಿಸಿತ್ತು. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರು. ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿ ಎಕ್ಸಿಟ್​ನಲ್ಲಿ ಗುರುವಾರ (ಏ. 3) ಈ ಅವಘಡ ಸಂಭವಿಸಿತ್ತು. ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರ ಸಾವನ್ನಪ್ಪಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಮೃತರ ಇನ್ನೂ ಗುರುತು ಪತ್ತೆ ಆಗಿಲ್ಲ.

ಎಕ್ಸ್​ಪ್ರೆಸ್ ಹೈವೇಯಿಂದ ಎಕ್ಸಿಟ್ ಆಗುವಾಗ ಟಾಟಾ ಪಂಚ್​ ಕಾರು ಚಾಲಕನಿಗೆ ಗೊಂದಲವಾಗಿದೆ. ಹೀಗಾಗಿ ಮತ್ತೆ ಎಕ್ಸ್​ಪ್ರೆಸ್ ಹೈವೇಗೆ ಕಾರು ತಿರುಗಿಸಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕೆಎಸ್​​ಆರ್​ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Karnataka Weather: ಮುಂದಿನ 6 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ!