ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pralhad Joshi: ಸಿಎಂ ದರ್ಪ, ಡಿಸಿಎಂ ಧಮ್ಕಿ ಎಲ್ಲೆ ಮೀರಿದೆ: ಪ್ರಲ್ಹಾದ್‌ ಜೋಶಿ ಆಕ್ರೋಶ

Pralhad Joshi: ಅಧಿಕಾರದ ಮದದಲ್ಲಿ ಮುಖ್ಯಮಂತ್ರಿಗೆ, ಒಬ್ಬ ಕರ್ತವ್ಯ ನಿರತ ಅಧಿಕಾರಿಯ ಮೇಲೆ ಕೈ ಎತ್ತುವಷ್ಟು ದರ್ಪ ಬಂದಿದೆ. ಇನ್ನು, ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬ ನಾಗರಿಕರಿಗೂ ಇದ್ದು, ಅದನ್ನೇ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಡಿಸಿಎಂ ಡಿಕೆ ಶಿವಕುಮಾರ್. ಸಂವಿಧಾನದ ರಕ್ಷಣೆ, ಪ್ರಜಾಪ್ರಭುತ್ವ ಎಂದೆಲ್ಲಾ ನಾಟಕೀಯ ನಡೆ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ಸಿಎಂ ದರ್ಪ, ಡಿಸಿಎಂ ಧಮ್ಕಿ ಎಲ್ಲೆ ಮೀರಿದೆ: ಪ್ರಲ್ಹಾದ್‌ ಜೋಶಿ ಆಕ್ರೋಶ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ.

Profile Siddalinga Swamy Apr 28, 2025 10:12 PM

ನವದೆಹಲಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ದರ್ಪ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಧಮ್ಕಿ ಎಲ್ಲೆ ಮೀರಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸಿಂದ ದುರಾಡಳಿತ ಮತ್ತು ದುರಹಂಕಾರದ ಪರಮಾವಧಿ ಮೀರಿದೆ. ಬೆಳಗಾವಿಯಲ್ಲಿ ಸಿಎಂ-ಡಿಸಿಎಂ ಈರ್ವರೂ ದುರಹಂಕಾರದ ಪರಮಾವಧಿ ಮೀರಿ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಅಧಿಕಾರದ ಮದ ನೆತ್ತಿಗೇರಿದೆ. ಹಾಗಾಗಿಯೇ ಕರ್ತವ್ಯ ನಿರತ ರಕ್ಷಣಾ ಅಧಿಕಾರಿ ಮೇಲೆಯೇ ಕೈ ಎತ್ತುವ ಹಂತ ತಲುಪಿದ್ದಾರೆ. ಸಾರ್ವಜನಿಕವಾಗಿ ಹೀಗೆ ಪೊಲೀಸ್ ಅಧಿಕಾರಿಯನ್ನು ಅವಮಾನಿಸುವುದು, ಪ್ರತಿಭಟನಾಕಾರರನ್ನು ಹತ್ತಿಕ್ಕುವುದು ಅಧಿಕಾರದ ಮದವೇ ಹೊರತು ಮತ್ತೇನೂ ಅಲ್ಲ ಎಂದು ಅವರು ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ದುರಾಡಳಿತದ ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆ ಮೇಲೆಯೇ ಬಹಿರಂಗವಾಗಿ ಎಎಸ್ಪಿ ಮೇಲೆ ಕೈ ಎತ್ತಿ ದರ್ಪ ಮೆರೆದಿದ್ದಾರೆ. ಇನ್ನು, ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ತಡೆವೊಡ್ಡಿದ್ದಲ್ಲದೆ, ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ಸಭೆ, ಸಮಾರಂಭ ನಡೆಸಲು ಬಿಡುವುದಿಲ್ಲವೆಂದು ರೌಡಿಗಳ ರೀತಿ ಧಮ್ಕಿ, ಬೆದರಿಕೆವೊಡ್ಡಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಒಂದು ಸತ್ಯ ಅರಿತುಕೊಳ್ಳಲಿ. ನಿಮ್ಮ ದುರಹಂಕಾರ, ದರ್ಪ, ದುರಾಡಳಿತದಿಂದ ರಾಜ್ಯದಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ನಿಮ್ಮೀ ದುರಾಡಳಿತ, ದುರಹಂಕಾರಕ್ಕೆ ಜನರೇ ಇತಿಶ್ರೀ ಹಾಡುವ ಕಾಲ ದೂರವಿಲ್ಲ ಎಂದು ಎಚ್ಚರಿಸಿದ್ದಾರೆ.

ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆ ಎನ್ನುವುದು ಇವರ ನಾಟಕೀಯ ನಡೆ

ಅಧಿಕಾರದ ಮದದಲ್ಲಿ ಮುಖ್ಯಮಂತ್ರಿಗೆ ಒಬ್ಬ ಕರ್ತವ್ಯ ನಿರತ ಅಧಿಕಾರಿಯ ಮೇಲೆ ಕೈ ಎತ್ತುವಷ್ಟು ದರ್ಪ ಬಂದಿದೆ. ಇನ್ನು, ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬ ನಾಗರಿಕರಿಗೂ ಇದ್ದು, ಅದನ್ನೇ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಡಿಸಿಎಂ ಡಿಕೆ ಶಿವಕುಮಾರ್. ಸಂವಿಧಾನದ ರಕ್ಷಣೆ, ಪ್ರಜಾಪ್ರಭುತ್ವ ಎಂದೆಲ್ಲಾ ನಾಟಕೀಯ ನಡೆ ತೋರುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಸಂವಿಧಾನ ಚರ್ಚೆ, ಮಾತುಕತೆ ಮತ್ತು ಅಭಿಪ್ರಾಯ ವ್ಯಕ್ತಪಡಿಸಲು ಪ್ರತಿಯೊಬ್ಬ ನಾಗರಿಕನಿಗೂ ಸ್ವಾತಂತ್ರ್ಯವಿದೆ. ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕು ದೇಶದ ಪ್ರತಿಯೊಬ್ಬ ಪ್ರಜೆಗೂ ಇದೆ ಅದನ್ನು ಹತ್ತಿಕ್ಕುವ ಕೆಲಸ ಮಾಡಬೇಡಿ ಎಂದು ಸಚಿವ ಜೋಶಿ ಆಗ್ರಹಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಪ್ರಜಾ ವಿರೋಧಿ ಸರ್ಕಾರದ ವಿರುದ್ಧ ಅಭಿಪ್ರಾಯ, ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ನಮ್ಮ ಸಂವಿಧಾನ ಪ್ರತಿ ನಾಗರಿಕನಿಗೂ ನೀಡಿದೆ. ಈ ಸಂವಿಧಾನಾತ್ಮಕ ಹಕ್ಕನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ ಎಂದು ಸಚಿವ ಪ್ರಲ್ಹಾದ್‌ ಜೋಶಿ ತಿರುಗೇಟು ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ | PM Kisan Scheme: ಜೂನ್‌ನಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ 19ನೇ ಕಂತು ಬಿಡುಗಡೆ? ಅರ್ಜಿ ಸಲ್ಲಿಕೆ ಹೇಗೆ?

ಧಮ್ಕಿ, ದ್ವೇಷದ ರಾಜಕಾರಣಕ್ಕೆ ಜನರೇ ಪಾಠ ಕಲಿಸುತ್ತಾರೆ

ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು ಎಂಬ ಕಾರಣಕ್ಕೆ ಉಪಮುಖ್ಯಮಂತ್ರಿ ಆದವರು ಈ ರೀತಿ ಬೆದರಿಸುವದು, ಧಮ್ಕಿ ಹಾಕುವುದು ಖಂಡನೀಯ ಮತ್ತು ಅಸಂವಿಧಾನಿಕ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಮುಂದಿನ ದಿನಗಳಲ್ಲಿ ನಿಮ್ಮೀ ಧಮ್ಕಿ, ದ್ವೇಷದ ರಾಜಕಾರಣಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.