ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಕಾರಿಗೆ ಲಾರಿ ಡಿಕ್ಕಿಯಾಗಿ ಸಾಗರದ ಐವರು ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿ (hubballi news) ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಲಾರಿಗೆ ಮುಖಾಮುಖಿಯಾಗಿ ಡಿಕ್ಕಿಯಾದ (Road accident) ಕಾರು ಅಪ್ಪಚ್ಚಿಯಾಗಿದೆ. ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಶಿವಮೊಗ್ಗ ಜಿಲ್ಲೆಯ ಸಾಗರದವರು ಎಂದು ತಿಳಿದುಬಂದಿದೆ.

ಕಾರಿಗೆ ಲಾರಿ ಡಿಕ್ಕಿಯಾಗಿ ಸಾಗರದ ಐವರು ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿಯಲ್ಲಿ ಕಾರಿಗೆ ಲಾರಿ ಡಿಕ್ಕಿ

ಹರೀಶ್‌ ಕೇರ ಹರೀಶ್‌ ಕೇರ May 6, 2025 10:25 AM

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ದಾರುಣ ರಸ್ತೆ ಅಪಘಾತ (road accident) ಸಂಭವಿಸಿದೆ. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ (lorry hit car) ಐವರು ಸ್ಥಳದಲ್ಲೇ ದುರ್ಮರಣ (death) ಹೊಂದಿರುವ ದಾರುಣ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ (hubballi news) ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಗುರುತಿಸಲಾಗಿದೆ. ಲಾರಿಗೆ ಮುಖಾಮುಖಿಯಾಗಿ ಡಿಕ್ಕಿಯಾದ ಕಾರು ಅಪ್ಪಚ್ಚಿಯಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸ್ಥಳದಲ್ಲೇ ಕೊನೆಯುಸಿರು ಎಳೆದಿದ್ದಾರೆ.

ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರದ ಶ್ವೇತಾ(29), ಅಂಜಲಿ (26), ಸಂದೀಪ್ (26), ವಿಠ್ಠಲ್ (55) ಮತ್ತು ಶಶಿಕಲಾ (40) ಎಂದು ಗುರುತಿಸಲಾಗಿದೆ. ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ, ಮೂವರ ಸಾವು

ಬೆಳಗಾವಿ: ಬೈಲಹೊಂಗಲ (Bailhongal) ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದ ಬೈಲಹೊಂಗಲ-ಬೆಳಗಾವಿಗೆ ಸಂಪರ್ಕಿಸುವ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ (Road Accident) ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಬೆಳಗಾವಿಯಿಂದ ಬೈಲಹೊಂಗಲ ಹೋಗುತ್ತಿದ್ದ ಕಿಯಾ ಕಾರು ಓವರ್ ಟೆಕ್ ಮಾಡಲು ಹೋಗಿ ಎದುರಗಡೆಯಿಂದ ಬರುತ್ತಿದ್ದ ಅಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಮೂಲಗಳು ತಿಳಿಸಿವೆ (Belagavi News). ಇನ್ನು ಅಪಘಾತದಲ್ಲಿ ಮಾಜಿ ಶಾಸಕ ಆರ್.ವಿ. ಪಾಟೀಲ್ ಅವರ ಪುತ್ರ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಅಲ್ಟೋ ಕಾರಿನಲ್ಲಿದ್ದ ಅಯುಮ್ ಹಾಗೂ ಅವರ ಪತ್ನಿ ಮತ್ತು ಮಗು ಎಂದು ಗುರತಿಸಲಾಗಿದೆ. ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಿಯಾ ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ. ಪಾಟೀಲ್ ಪುತ್ರ ಸೇರಿದಂತೆ ಮತ್ತೊಬ್ಬರು ಗಾಯಗೊಂಡಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case: ಮದುವೆ ಮನೆಯಲ್ಲಿ ತಂದೂರಿ ರೊಟ್ಟಿಗಾಗಿ ಜಗಳ; ಇಬ್ಬರ ಸಾವು!