Police Firing: ಧಾರವಾಡದಲ್ಲಿ ಇಬ್ಬರು ಕಳ್ಳರಿಗೆ ಪೊಲೀಸ್ ಗುಂಡೇಟು, ಸೆರೆ
Dharawad: ಧಾರವಾಡ ನಗರದ ಮನೆಯೊಂದರಲ್ಲಿ ಈ ಕಳ್ಳರು ಕಳ್ಳತನ ಮಾಡಿದ್ದರು. ಬಳಿಕ ಪರಾರಿ ಆಗುವ ವೇಳೆ ಪೊಲೀಸರ ಕೈಗೆ ಇಬ್ಬರು ಕಳ್ಳರು ಸಿಕ್ಕಿ ಬಿದ್ದಿದ್ದಾರೆ. ಪಿಎಸ್ಐ ಮೇಲೆ ಹಲ್ಲಿ ನಡೆಸಿ ಕಳ್ಳರು ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಪಿಎಸ್ಐ ಮಲ್ಲಿಕಾರ್ಜುನ್ ಇಬ್ಬರ ಮೇಲೂ ಗುಂಡಿನ ದಾಳಿ ನಡೆಸಿದ್ದಾರೆ.


ಧಾರವಾಡ : ಧಾರವಾಡದಲ್ಲಿ (Dharawad) ಪೊಲೀಸರು ಇಬ್ಬರು ಕಳ್ಳರನ್ನು ಗುಂಡು ಹಾರಿಸಿ (Police Firing) ಗಾಯಗೊಳಿಸಿ ಬಂಧಿಸಿದ್ದಾರೆ. ಕಳ್ಳತನ ಮಾಡಿ, ಪಿಎಸ್‌ಐ ಮೇಲೆ ಹಲ್ಲೆ (Assault) ನಡೆಸಿ ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರ ಮೇಲೆ ಫೈರಿಂಗ್ ನಡೆಸಲಾಗಿದೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳಾದ ಮುಜಾಮಿಲ್ ಮತ್ತು ವಿಜಯ್ ಎಂಬವರನ್ನು ಪರಾರಿ ಆಗುವ ವೇಳೆ ಪೊಲೀಸರು ಸೆರೆ ಹಿಡಿದಿದ್ದಾರೆ.
ಧಾರವಾಡ ನಗರದಲ್ಲಿ ಗಿರಿನಗರದ ಬಡಾವಣೆಯ ಮನೆಯೊಂದರಲ್ಲಿ ಈ ಕಳ್ಳರು ಕಳ್ಳತನ ಮಾಡಿದ್ದರು. ಬಳಿಕ ಪರಾರಿ ಆಗುವ ವೇಳೆ ಪೊಲೀಸರ ಕೈಗೆ ಇಬ್ಬರು ಕಳ್ಳರು ಸಿಕ್ಕಿ ಬಿದ್ದಿದ್ದಾರೆ. ಪಿಎಸ್ಐ ಮೇಲೆ ಹಲ್ಲಿ ನಡೆಸಿ ಕಳ್ಳರು ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಪಿಎಸ್ಐ ಮಲ್ಲಿಕಾರ್ಜುನ್ ಇಬ್ಬರ ಮೇಲೂ ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಗಳಾದ ಮುಜಾಮಿಲ್ ಮತ್ತು ವಿಜಯ್ ಕಾಲಿಗೆ ಗುಂಡೇಟು ತಗುಲಿದ್ದು, ಗಾಯಾಳುಗಳನ್ನು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆ
ಬೆಂಗಳೂರು: ನಗರದ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳು (Bengaluru News) ಬುಧವಾರ ಪತ್ತೆಯಾಗಿವೆ. ಸ್ಥಳಕ್ಕೆ ಪೊಲೀಸರು, ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ, ಪರಿಶೀಲನೆ ನಡೆಸಿವೆ. ಒಂದು ಬ್ಯಾಗ್‌ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಮಾಹಿತಿ ಇದ್ದು, ಸ್ಫೋಟಕ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದ ಮೂಲೆ ಮೂಲೆಯಲ್ಲೂ ಪೊಲೀಸರು ತಪಾಸಣೆಯನ್ನು ನಡೆಸಿದ್ದಾರೆ.
ಸ್ಫೋಟಕ ವಸ್ತುಗಳಿಂದ ಬ್ಯಾಗ್ ಅನ್ನು ಬಸ್ ನಿಲ್ದಾಣದಲ್ಲಿ ಇಟ್ಟು ತೆರಳಿದವರು ಯಾರು ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜಿಲೆಟಿನ್ ಕಡ್ಡಿ ಜತೆಗೆ ಕೆಲವು ಡಿಟೋನೆಟರ್ಗಳು ಕೂಡ ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Lokayukta Raid: ಒಬ್ಬ ಐಎಎಸ್ ಸೇರಿ 8 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ, 37.41 ಕೋಟಿ ಮೌಲ್ಯದ ಆಸ್ತಿ ಪತ್ತೆ