Vinay Kulakarni: ಶಾಸಕ ಸ್ಥಾನ ಉಳಿಸಿಕೊಳ್ಳಲು ಮುಂದಾದ ವಿನಯ್ ಕುಲಕರ್ಣಿ, ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ
ಕೆಳಹಂತದ ನ್ಯಾಯಾಲಯ ನೀಡಿದ ತೀರ್ಪಿಗೆ ತಡೆ ನೀಡಬೇಕು ಮತ್ತು ತಮಗೆ ವಿಧಿಸಲಾದ ಶಿಕ್ಷೆಯನ್ನು ರದ್ದುಗೊಳಿಸಬೇಕು ಎಂದು ವಿನಯ್ ಹೈಕೋರ್ಟ್‌ಗೆ ನೀಡಿದ ಅರ್ಜಿಯ ಮುಖ್ಯ ಉದ್ದೇಶವಾಗಿದೆ. ಮೇಲ್ಮನವಿ ಇತ್ಯರ್ಥವಾಗುವವರೆಗೆ ತಮಗೆ ಮಧ್ಯಂತರ ಜಾಮೀನು ನೀಡಬೇಕು ಎಂಬ ವಿನಂತಿಯನ್ನೂ ಅವರು ನ್ಯಾಯಾಲಯದ ಮುಂದೆ ಇಡುವ ಸಾಧ್ಯತೆಯಿದೆ.
ಯೋಗೇಶ್ ಗೌಡ, ವಿನಯ್ ಕುಲಕರ್ಣಿ -
ಬೆಂಗಳೂರು, ಏ.25 : ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ (Yogesh Gowda murder case) ಸಂಬಂಧಪಟ್ಟಂತೆ ಇತ್ತೀಚಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ (Vinay kulakarni) ಜೀವಾವಧಿ ಶಿಕ್ಷೆ (life sentence) ಪ್ರಕಟಿಸಿತ್ತು. ಇದೀಗ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟಿಗೆ (Karnataka high court) ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ಹೊರಡಿಸಿತ್ತು. ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆಯಾದ ಪರಿಣಾಮ, ಅವರ ಶಾಸಕ ಸ್ಥಾನಕ್ಕೆ ಕುತ್ತು ತಂದಿತ್ತು. ಹೀಗಾಗಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣದ ಹಿನ್ನೆಲೆ
2016 ರಲ್ಲಿ ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಅವರ ಹತ್ಯೆ ನಡೆದಿತ್ತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇತ್ತೀಚೆಗೆ ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳನ್ನು ದೋಷಿಗಳೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿತ್ತು.
Yogesh gowda Murder Case: ಯೋಗೇಶ್ ಗೌಡ ಮಕ್ಕಳಿಗೆ 16 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ
ಕೆಳಹಂತದ ನ್ಯಾಯಾಲಯ ನೀಡಿದ ತೀರ್ಪಿಗೆ ತಡೆ ನೀಡಬೇಕು ಮತ್ತು ತಮಗೆ ವಿಧಿಸಲಾದ ಶಿಕ್ಷೆಯನ್ನು ರದ್ದುಗೊಳಿಸಬೇಕು ಎಂದು ವಿನಯ್ ಹೈಕೋರ್ಟ್‌ಗೆ ನೀಡಿದ ಅರ್ಜಿಯ ಮುಖ್ಯ ಉದ್ದೇಶವಾಗಿದೆ. ಮೇಲ್ಮನವಿ ಇತ್ಯರ್ಥವಾಗುವವರೆಗೆ ತಮಗೆ ಮಧ್ಯಂತರ ಜಾಮೀನು ನೀಡಬೇಕು ಎಂಬ ವಿನಂತಿಯನ್ನೂ ಅವರು ನ್ಯಾಯಾಲಯದ ಮುಂದೆ ಇಡುವ ಸಾಧ್ಯತೆಯಿದೆ. ಹೈಕೋರ್ಟ್ ಈ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ ಬಳಿಕ ತನಿಖಾ ಸಂಸ್ಥೆಗಳಿಗೆ (CBI) ನೋಟಿಸ್ ನೀಡಲಿದೆ.