ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಬೆಂಗಳೂರು ಟನಲ್ ರಸ್ತೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿ.ಕೆ.ಶಿವಕುಮಾರ್

DK Shivakumar: ಬೆಂಗಳೂರಿನಲ್ಲಿ ಮೊದಲ ಹಂತದ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಂದಿನ‌ 4-5 ದಿನಗಳಲ್ಲಿ ಅಂತಿಮಗೊಳ್ಳಲಿದೆ. ಹೆಬ್ಬಾಳ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್‌ವರೆಗೆ ಸುಮಾರು 40 ಕಿ.ಮೀ ಮತ್ತು 23 ಕಿ.ಮೀ ಉದ್ದದ ಮೈಸೂರು ರಸ್ತೆಯಿಂದ ಕೆ.ಆರ್.ಪುರದವರೆಗೆ ಟ್ವಿನ್ ಟನಲ್ ರಸ್ತೆ ನಿರ್ಮಾಣಕ್ಕೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ಟನಲ್ ರಸ್ತೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಕೆಶಿ

ಡಿಸಿಎಂ ಡಿ.ಕೆ ಶಿವಕುಮಾರ್

Profile Siddalinga Swamy Jul 4, 2025 9:56 PM

ಬೆಂಗಳೂರು: ಮೊದಲ ಹಂತದ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಂದಿನ‌ 4-5 ದಿನಗಳಲ್ಲಿ ಅಂತಿಮಗೊಳ್ಳಲಿದೆ. ಮೊದಲ ಹಂತಕ್ಕೆ 17 ಸಾವಿರ ಕೋಟಿ,‌ ಎರಡನೇ ಹಂತಕ್ಕೆ 23 ಸಾವಿರ ಕೋಟಿ ವ್ಯಯಿಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar)‌ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಸಂಸ್ಥೆಗೆ ಶುಕ್ರವಾರ ಪ್ರತಿಕ್ರಿಯೆ ನೀಡಿರುವ ಅವರು, ಹೆಬ್ಬಾಳ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್‌ವರೆಗೆ ಸುಮಾರು 40 ಕಿ.ಮೀ ಮತ್ತು 23 ಕಿ.ಮೀ ಉದ್ದದ ಮೈಸೂರು ರಸ್ತೆಯಿಂದ ಕೆ.ಆರ್.ಪುರದವರೆಗೆ ಟ್ವಿನ್ ಟನಲ್ ರಸ್ತೆ ನಿರ್ಮಾಣಕ್ಕೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ತಿಳಿಸಿದರು.

130 ಕಿ.ಮೀ ಮೇಲ್ಸೆತುವೆಗಳು, ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್ ಡೆಕ್ಕರ್‌ಗಳ ನಿರ್ಮಾಣ ಮಾಡಲಾಗುವುದು. ಈಗಾಗಲೇ 7 ಕಿ.ಮೀ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗಿದ್ದು, 37 ಕಿ.ಮೀ ಡಬಲ್ ಡೆಕ್ಕರ್ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.‌ ಶೀಘ್ರದಲ್ಲೇ ಇದಕ್ಕೂ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಲಾಗುವುದು. ರಾಜಕಾಲುವೆಗಳ ಪಕ್ಕದಲ್ಲಿ 300 ಕಿ.ಮೀ ಉದ್ದದ ರಸ್ತೆ ನಿರ್ಮಾಣವೂ ನಮ್ಮ ಯೋಜನೆಯಲ್ಲಿ ಒಳಗೊಂಡಿದೆ.‌ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸುವುದು ನಮ್ಮ ಆದ್ಯತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಈ ಸುದ್ದಿಯನ್ನೂ ಓದಿ | CM Siddaramaih: ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಹಿಂಬಾಕಿ ಪಾವತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ