ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ಯುದ್ಧದ ಬಗ್ಗೆ ಸುಳ್ಳು ಸುದ್ದಿ ಹರಡುವವರ ಮೇಲೆ ಕ್ರಮ: ಕಮಿಷನರ್‌

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್ ದಯಾನಂದ್, ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆ (Operation Sindoor) ಆಗಿವೆ. ಅಧಿಕೃತ ಮಾಧ್ಯಮಗಳ ಮೂಲಕ ಈ ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತದೆ. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.

ಯುದ್ಧದ ಬಗ್ಗೆ ಸುಳ್ಳು ಸುದ್ದಿ ಹರಡುವವರ ಮೇಲೆ ಕ್ರಮ: ಕಮಿಷನರ್‌

ಕಮಿಷನರ್‌ ಬಿ. ದಯಾನಂದ್

ಹರೀಶ್‌ ಕೇರ ಹರೀಶ್‌ ಕೇರ May 9, 2025 9:31 AM

ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಭಾರತ ಪ್ರತೀಕಾರ (Operation Sindoor) ತೀರಿಸಿಕೊಂಡಿದ್ದು, ಕ್ರುದ್ಧಗೊಂಡಿರುವ ಪಾಕಿಸ್ತಾನ (Pakistan border) ಗಡಿಯಲ್ಲಿ ಶೆಲ್ ಹಾಗೂ ಡ್ರೋನ್‌ ದಾಳಿ (Drone attack) ನಡೆಸುತ್ತಿದೆ. ಭಾರತ ಈ ದಾಳಿಗಳನ್ನು ಯಶಸ್ವಿಯಾಗಿ ತಡೆಯುತ್ತಿದೆ. ಈ ಕುರಿತು ಸುಳ್ಳು ಸುದ್ದಿಗಳನ್ನು ಹರಡಬಾರದು ಎಂದು ಬೆಂಗಳೂರಲ್ಲಿ ಕಮಿಷನರ್ ಬಿ.ದಯಾನಂದ್ (Bengaluru commissioner) ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಕಾಳಗದ ನಡುವೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದು

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್ ದಯಾನಂದ್, ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆ ಆಗಿವೆ. ಅಧಿಕೃತ ಮಾಧ್ಯಮಗಳ ಮೂಲಕ ಈ ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತದೆ. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಸಿಬ್ಬಂದಿಗಳಿಗೆ ಹಲವು ಸೂಚನೆ ನೀಡಲಾಗಿದೆ. ನಗರದ ಎಲ್ಲಾ ಕಡೆಗೆ ಸೂಕ್ತ ಆಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಹೇಳಿಕೆ ನೀಡಿದರು.

ಆಹಾರ ಧಾನ್ಯ ಕೊರತೆ ಇಲ್ಲ, ದುಪ್ಪಟ್ಟು ಸಂಗ್ರಹವಿದೆ: ಪ್ರಹ್ಲಾದ ಜೋಶಿ

ನವದೆಹಲಿ: ದೇಶದಲ್ಲಿ ಆಹಾರ ಮತ್ತು ಅಗತ್ಯ ವಸ್ತುಗಳ ಕೊರತೆ ಉಂಟಾಗಿದೆ ಎಂಬುದು ಶುದ್ಧ ಸುಳ್ಳು. ಯಾರೊಬ್ಬರೂ ಈ ಹುಸಿ ವದಂತಿಗೆ ಕಿವಿಗೊಡಬಾರದು ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ದೇಶದ ವಿವಿಧೆಡೆ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಕೊರತೆಯಿದೆ ಎಂದು ಕೆಲವರು ಸುಳ್ಳು ವದಂತಿಗಳನ್ನು ಹರಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಸ್ತುತ ಸನ್ನಿವೇಶದಲ್ಲಿ ಜನರನ್ನು ದಿಕ್ಕು ತಪ್ಪಿಸುವ ಕಿಡಿಗೇಡಿಗಳ ಪ್ರಯತ್ನ ಇದಾಗಿದೆ ಎಂದು ಸ್ಪಷ್ಟಪಡಿಸಿದರು.

ಪಂಜಾಬ್‌ನಿಂದ ಇಂಥ ಸುಳ್ಳು ವದಂತಿ ಹಬ್ಬಿಸಲಾಗಿದೆ. ಆದರೆ, ದೇಶದ ಯಾವುದೇ ಸ್ಥಳದಲ್ಲೂ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಕೊರತೆಯಿಲ್ಲ. ಅಗತ್ಯಕ್ಕಿಂತ ಹೆಚ್ಚೇ ದಾಸ್ತಾನಿದೆ. ಜನರು ಅಗತ್ಯ ಆಹಾರ ಧಾನ್ಯ ಮತ್ತು ದೈನಂದಿನ ಅಗತ್ಯ ವಸ್ತುಗಳಿಗೆ ಎಲ್ಲೂ ಮುಗಿಬೀಳಬೇಕಿಲ್ಲ ಎಂದು ಹೇಳಿದರು. ದೇಶಾದ್ಯಂತ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಸಂಗ್ರಹಣೆ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಿದೆ. ಎಲ್ಲೆಡೆಯೂ ಅಗತ್ಯಕ್ಕಿಂತ ದೊಡ್ಡ ಮಟ್ಟದಲ್ಲೇ ಆಹಾರ ಧಾನ್ಯ ಮತ್ತು ಅಗತ್ಯ ಸಾಮಾನು ಸರಂಜಾಮು ಇರುವುದು ದೃಢಪಟ್ಟಿದೆ. ದೇಶದಲ್ಲಿ ಸಾಕಷ್ಟು ಸಂಗ್ರಹವಿದೆ. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವ ಜೋಶಿ ದೇಶದ ಜನತೆಗೆ ಸಂದೇಶ ರವಾನಿಸಿದರು.

ಇದನ್ನೂ ಓದಿ: Operation Sindoor: ಬಿಎಸ್‌ಎಫ್ ಶಿಬಿರದ ಮೇಲೆ ಮತ್ತೆ ಪಾಕ್‌ ಡ್ರೋನ್ ದಾಳಿಗೆ ಯತ್ನ