ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ranya Rao case: ನಟಿ ರನ್ಯಾರಾವ್‌ಗೆ ಬಿಗ್‌ ಶಾಕ್‌; 102 ಕೋಟಿ ದಂಡ ಕಟ್ಟುವಂತೆ ಡಿಆರ್‌ಐ ನೋಟಿಸ್‌!

Ranya Rao case: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಡಿಆರ್‌ಐ ನೋಟಿಸ್ ನೀಡಿದೆ. ಈಗಾಗಲೇ ಇ.ಡಿ. ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ 37 ಕೋಟಿಯಷ್ಟು ಆಸ್ತಿಯನ್ನು ಜಪ್ತಿ ಮಾಡಿತ್ತು. ಇದರ ಬೆನ್ನಲ್ಲೇ ನಟಿ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ನಟಿ ರನ್ಯಾರಾವ್‌ಗೆ ಶಾಕ್‌; 102 ಕೋಟಿ ದಂಡ ಕಟ್ಟುವಂತೆ ನೋಟಿಸ್‌!

-

Prabhakara R Prabhakara R Sep 2, 2025 4:58 PM

ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟಿ ರನ್ಯಾರಾವ್‌ಗೆ ಬಿಗ್‌ ಶಾಕ್‌ ಎದುರಾಗಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆಯಲ್ಲಿ ಬರೋಬ್ಬರಿ 102.55 ಕೋಟಿ ರೂಪಾಯಿ ದಂಡ ಕಟ್ಟುವಂತೆ ನಟಿಗೆ, ಡಿಆರ್‌ಐ ನೋಟಿಸ್ ನೀಡಿದೆ.

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಡಿಆರ್‌ಐ ನೋಟಿಸ್ ನೀಡಿದೆ. ಈಗಾಗಲೇ ಇ.ಡಿ. ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ 37 ಕೋಟಿಯಷ್ಟು ಆಸ್ತಿಯನ್ನು ಜಪ್ತಿ ಮಾಡಿತ್ತು. ಇದರ ಬೆನ್ನಲ್ಲೇ ನಟಿ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ದಂಡ ಪಾವತಿ ಮಾಡದಿದ್ದರೆ ಆಸ್ತಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಲು ಅವಕಾಶವಿದೆ. ಎ2 ಆರೋಪಿ ತರುಣ್ ಕೊಂಡುರು ರಾಜು 67.6 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವುದು ಧೃಡವಾಗಿದೆ. ಈತನಿಗೆ 62 ಕೋಟಿ ರೂ. ದಂಡ ವಿಧಿಸಲಾಗಿದೆ. ಸಾಹಿಲ್ ಜೈಲ್ ಮತ್ತು ಭರತ್ ಜೈನ್ ತಲಾ 63.61 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವುದು ಧೃಡಪಟ್ಟಿದೆ. ಭರತ್ ಜೈನ್ ಹಾಗೂ ಸಾಹಿಲ್ ಜೈನ್ 53 ಕೋಟಿ ದಂಡ ಪಾವತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಜೊತೆಗೆ ಕ್ರಿಮಿನಲ್ ಕೇಸ್ ಕೂಡ ಮುಂದುವರಿಯಲಿದೆ.

ರನ್ಯಾ ರಾವ್‌ ಕೇಸ್‌ಗೆ ಸಂಬಂಧಿಸಿ ಇಂದು ಹೈಕೋರ್ಟ್​​ನಲ್ಲಿ ಕಾಫಿಪೋಸಾ ಅರ್ಜಿ ಕೂಡ ವಿಚಾರಣೆ ಆಗಿದ್ದು, ಅರ್ಜಿ ವಿಚಾರಣೆ ಸೆ.11ಕ್ಕೆ ಮುಂದೂಡಲಾಗಿದೆ.

ಏನಿದು ಪ್ರಕರಣ?

ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕನ್ನಡದ ನಟಿ ರನ್ಯಾ ರಾವ್ ಬಂಧನವಾಗಿತ್ತು. ಕಳೆದ ಮಾರ್ಚ್​ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ)ದ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ,ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು. ರನ್ಯಾ ರಾವ್ ಮತ್ತು ಅವರ ಸಹಚರರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಮೇ ತಿಂಗಳಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯ ನಟಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ, ರನ್ಯಾ ರಾವ್ ಮತ್ತು ಅವರ ಇಬ್ಬರು ಸಹಚರರಾದ ತರುಣ್ ಕೊಡೂರು ರಾಜು ಹಾಗೂ ಸಾಹಿಲ್ ಸಕರಿಯಾ ಜೈನ್ ಅವರನ್ನು ಕಠಿಣ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ 1974 (COFEPOSA ಕಾಯ್ದೆ, 1974) ಅಡಿಯಲ್ಲಿ ಬಂಧಿಸಿರುವುದರಿಂದ ನಟಿ ಜೈಲಿನಿಂದ ಬಿಡುಗಡೆಯಾಗಿರಲಿಲ್ಲ.

ಈ ಸುದ್ದಿಯನ್ನೂ ಓದಿ | Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ಎನ್‌ಜಿಒಗಳಿಗೆ ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ

ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ (CEIB) ಕಾಫಿಪೋಸಾ ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಕಾಯ್ದೆ ಅನ್ವಯ ಆರೋಪಿ ರನ್ಯಾ ರಾವ್‌ಗೆ ಒಂದು ವರ್ಷ ಜಾಮೀನು ಪಡೆಯಲು ಅವಕಾಶವಿರುವುದಿಲ್ಲ. ಹೀಗಾಗಿ ಅವರು ಸದ್ಯ ಜೈಲುವಾಸದಲ್ಲಿದ್ದಾರೆ.