ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದಲ್ಲಿ ಮುಂದುವರಿದ ಒಣಹವೆ; ಹಲವು ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಹೆಚ್ಚಳ

ಒಣಹವೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲೂ ಬಹುತೇಕ ಇದೇ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಶುಭ್ರ ಆಕಾಶದೊಂದಿಗೆ ಒಣ ಹವೆ ಇರಲಿದೆ. ಹಗಲಿನಲ್ಲಿ ಬಿಸಿಲಿನ ತಾಪಮಾನ ಹೆಚ್ಚಿರಲಿದ್ದು, ಮಂಗಳೂರಿನಲ್ಲಿ ಗರಿಷ್ಠ 32°C ಹಾಗೂ ಕನಿಷ್ಠ 23°C ತಾಪಮಾನ ದಾಖಲಾಗುವ ನಿರೀಕ್ಷೆಯಿದೆ.

ರಾಜ್ಯದಲ್ಲಿ ಮುಂದುವರಿದ ಒಣಹವೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Nov 17, 2026 8:08 AM

ಬೆಂಗಳೂರು: ಒಣಹವೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲೂ ಬಹುತೇಕ ಇದೇ ವಾತಾವರಣ ಮುಂದುವರಿಯಲಿದೆ. (Karnataka Weather) ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಶುಭ್ರ ಆಕಾಶದೊಂದಿಗೆ ಒಣ ಹವೆ ಇರಲಿದೆ. ಹಗಲಿನಲ್ಲಿ ಬಿಸಿಲಿನ ತಾಪಮಾನ ಹೆಚ್ಚಿರಲಿದ್ದು, ಮಂಗಳೂರಿನಲ್ಲಿ ಗರಿಷ್ಠ 32°C ಹಾಗೂ ಕನಿಷ್ಠ 23°C ತಾಪಮಾನ ದಾಖಲಾಗುವ ನಿರೀಕ್ಷೆಯಿದೆ. ಹೊನ್ನಾವರ ಮತ್ತು ಕಾರವಾರ ಭಾಗಗಳಲ್ಲಿ ಕನಿಷ್ಠ ತಾಪಮಾನ 21°C ಆಸುಪಾಸಿನಲ್ಲಿರಲಿದೆ.

ಉತ್ತರ ಒಳನಾಡಿನ ಗದಗ, ಕೊಪ್ಪಳ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ರಾತ್ರಿ ಹಾಗೂ ಮುಂಜಾನೆ ತಂಪಾದ ಗಾಳಿ ಬೀಸುತ್ತಿದೆ. ಬೀದರ್ (14.2°C), ಬೆಳಗಾವಿ (14.4°C), ವಿಜಯಪುರ (15.5°C) ಮತ್ತು ಧಾರವಾಡ (15.8°C) ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಇಳಿಕೆಯಾಗಿದೆ. ಕಲಬುರಗಿಯಲ್ಲಿ ಹಗಲಿನ ಗರಿಷ್ಠ ತಾಪಮಾನ 33.3°C ಮತ್ತು ರಾಯಚೂರಿನಲ್ಲಿ 32°C ತಲುಪುವ ಮೂಲಕ ಬಿಸಿಲಿನ ಝಳ ಕಂಡುಬರಲಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ.

ರಾಜಧಾನಿ ಬೆಂಗಳೂರು, ಮೈಸೂರು, ಮಂಡ್ಯ, ಚಿತ್ರದುರ್ಗ ಸೇರಿದಂತೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇಂದು ಒಣ ಹವೆ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ 28°C ಮತ್ತು ಕನಿಷ್ಠ 16°C ತಾಪಮಾನ ನಿರೀಕ್ಷಿಸಲಾಗಿದೆ. ಮೈಸೂರಿನಲ್ಲಿ ಗರಿಷ್ಠ 27.4°C ಹಾಗೂ ಕನಿಷ್ಠ 17.6°C ದಾಖಲಾಗುವ ಸಾಧ್ಯತೆಯಿದೆ. ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಆಗುಂಬೆಯಲ್ಲಿ ಮುಂಜಾನೆ ಮಂಜು ಕವಿದ ವಾತಾವರಣವಿದ್ದು, ಕನಿಷ್ಠ ತಾಪಮಾನ 15°C ರಿಂದ 17°C ವರೆಗೆ ಇರಲಿದೆ.

Karnataka weather : ಕರ್ನಾಟಕ ಹವಾಮಾನ ವರದಿ: ಇಂದು ಚಳಿ ಮತ್ತು ಬಿಸಿಲಿನ ಆಟ

ಹವಾಮಾನ ಇಲಾಖೆಯ ವರದಿಯಂತೆ ನವೆಂಬರ್ 19 ರವರೆಗೆ ರಾಜ್ಯದಾದ್ಯಂತ ಇದೇ ರೀತಿಯ ಒಣ ಹವೆ ಮುಂದುವರಿಯಲಿದೆ. ನವೆಂಬರ್ 20 ರ ನಂತರ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.