ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ED raid: ಕಾಂಗ್ರೆಸ್‌ ಶಾಸಕ ಹ್ಯಾರಿಸ್‌, ಪುತ್ರ ನಲಪಾಡ್‌ ನಿವಾಸಗಳ ಮೇಲೆ ಇಡಿ ದಾಳಿ

ಬೆಂಗಳೂರಿನ ಒಟ್ಟು 17 ವಿವಿಧ ಸ್ಥಳಗಳಲ್ಲಿ ಇಡಿ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ಜಾಲಾಡುತ್ತಿದೆ. ಬಹುಚರ್ಚಿತ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ಈ ಕ್ರಮ ಕೈಗೊಳ್ಳಲಾಗಿದೆ.

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌, ಪುತ್ರ ನಲಪಾಡ್‌ ನಿವಾಸಗಳ ಮೇಲೆ ಇಡಿ ದಾಳಿ

ಎನ್‌ಎ ಹ್ಯಾರಿಸ್‌, ನಲಪಾಡ್ -

ಹರೀಶ್‌ ಕೇರ
ಹರೀಶ್‌ ಕೇರ Apr 20, 2026 10:59 AM

ಬೆಂಗಳೂರು, ಏ.20: ರಾಜ್ಯ ರಾಜಧಾನಿಯಲ್ಲಿ ಇಂದು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಅಧ್ಯಕ್ಷರಾದ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಅವರ ನಿವಾಸಗಳ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಒಟ್ಟು 17 ವಿವಿಧ ಸ್ಥಳಗಳಲ್ಲಿ ಇಡಿ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ಜಾಲಾಡುತ್ತಿದೆ. ಬಹುಚರ್ಚಿತ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ಈ ಕ್ರಮ ಕೈಗೊಳ್ಳಲಾಗಿದೆ.

ಶಾಸಕರ ಮನೆ ಹಾಗೂ ಕಚೇರಿಗಳಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಬ್ಯಾಂಕ್ ವಹಿವಾಟು ಹಾಗೂ ಆಸ್ತಿ ಪಾಸ್ತಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎನ್.ಎ. ಹ್ಯಾರಿಸ್ ಅವರು ಪ್ರಸ್ತುತ ಬಿಡಿಎ ಅಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದು, ಈ ಸಮಯದಲ್ಲಿ ನಡೆದಿರುವ ಇಡಿ ದಾಳಿ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಬೆಳ್ಳಂಬೆಳಿಗ್ಗೆ 6 ಗಂಟೆಯಿಂದಲೇ ಆರಂಭವಾದ ಈ ಕಾರ್ಯಾಚರಣೆಯು ಇನ್ನೂ ಮುಂದುವರಿದಿದ್ದು, ದಾಳಿಯ ಅಂತ್ಯಕ್ಕೆ ಇಡಿ ಅಧಿಕಾರಿಗಳು ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆಯಿದೆ. ರಾಜ್ಯ ರಾಜಕಾರಣದಲ್ಲಿ ಈ ಬೆಳವಣಿಗೆಯು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ನಾಂದಿ ಹಾಡುವ ಲಕ್ಷಣಗಳು ದಟ್ಟವಾಗಿವೆ.

ED Raid: ರಾಜ್ಯದಲ್ಲಿ ಸಚಿವರ ಆಪ್ತರ ಮನೆಗಳ ಮೇಲೆ ಇಡಿ ದಾಳಿ