ED Raid: ಗೃಹ ಸಚಿವ ಡಾ. ಜಿ ಪರಮೇಶ್ವರ್ ಒಡೆತನದ ಸಂಸ್ಥೆ ಮೇಲೆ ಇಡಿ ದಾಳಿ
ಸಿದ್ದಾರ್ಥ ಶಿಕ್ಷಣ ಸಂಸ್ಥೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಒಡೆತನಕ್ಕೆ ಸೇರಿದೆ. ತುಮಕೂರಿನಲ್ಲಿರುವ ಎಸ್‌ಎಸ್‌ಐಟಿ ಕಾಲೇಜು ಹಾಗೂ ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಇಡಿ ಅಧಿಕಾರಿಗಳು (ED Raid) ಪರಿಶೀಲನೆ ನಡೆಸುತ್ತಿದ್ದಾರೆ.

ಜಿ ಪರಮೇಶ್ವರ್

ತುಮಕೂರು: ಗೃಹ ಸಚಿವ ಡಾ. ಜಿ ಪರಮೇಶ್ವರ್ (Home minister G Parameshwar) ಒಡೆತನದ ತುಮಕೂರಿನ (Tumkur news) ಸಿದ್ದಾರ್ಥ ಕಾಲೇಜಿನ (Siddhartha College) ಮೇಲೆ ಇಡಿ ಅಧಿಕಾರಿಗಳು ದಾಳಿ (ED Raid) ನಡೆಸಿದ್ದಾರೆ. ಬೆಳ್ಳಂ ಬೆಳಗ್ಗೆಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. 5 ಕಾರುಗಳಲ್ಲಿ ಬಂದ ಇಡಿ ಅಧಿಕಾರಿಗಳು ಸಂಸ್ಥೆಯ ಕಚೇರಿಗೆ ತೆರಳಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಸಿದ್ದಾರ್ಥ ಶಿಕ್ಷಣ ಸಂಸ್ಥೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಒಡೆತನಕ್ಕೆ ಸೇರಿದೆ. ತುಮಕೂರಿನಲ್ಲಿರುವ ಎಸ್‌ಎಸ್‌ಐಟಿ ಕಾಲೇಜು ಹಾಗೂ ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ನೆಲಮಂಗಲದ ಟಿ.ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ರೇಡ್ ಮಾಡಲಾಗಿದೆ. ಬೆಳ್ಳಂಬೆಳಗ್ಗೆಯೇ 5 ಇನ್ನೋವಾ ಕಾರುಗಳಲ್ಲಿ ಸಿದ್ದಾರ್ಥ ಕಾಲೇಜಿಗೆ ಬಂದಿಳಿದ ಇಡಿ ಅಧಿಕಾರಿಗಳು, ಪ್ರಿನ್ಸಿಪಾಲ್ ಕಚೇರಿಗೆ ತೆರಳಿದ್ದು, ಕಚೇರಿಯಲ್ಲಿನ ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.
ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರಿನಲ್ಲಿರುವ ಗೃಹ ಸಚಿವ ಜಿ ಪರಮೇಶ್ವರ್ ಅವರು ತಮ್ಮದೇ ಆದ ಸಿದ್ದಾರ್ಥ ವಿದ್ಯಾಸಂಸ್ಥೆ ಮೇಲಿನ ಇಡಿ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ, ಡಾ.ಜಿ.ಪರಮೇಶ್ವರ್ ಅವರು ಪತ್ನಿ ಕನ್ನಿಕಾ ಜೊತೆ ತೆರಳಿದ್ದಾರೆ.
2019ರಲ್ಲೂ ಐಟಿ ದಾಳಿ
2019ರಲ್ಲಿ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿತ್ತು. ಆಗ ವೈದ್ಯಕೀಯ ಸೀಟು ಅಕ್ರಮ ಹಂಚಿಕೆ ಆರೋಪ ಸಂಬಂಧ ಐಟಿ ದಾಳಿ ನಡೆದಿತ್ತು. ಆ ದಾಳಿ ಸಂದರ್ಭದಲ್ಲಿ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಈ ಬೆಳವಣಿಗೆಯ ನಂತರ ಅವರು ಬೆಂಗಳೂರಿನ ಜ್ಞಾನ ಭಾರತಿ ವಿವಿ ಕ್ಯಾಂಪಸ್ ವ್ಯಾಪ್ತಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದರು. ಈ ವಿಚಾರ ಕರ್ನಾಟಕ ರಾಜಕೀಯದಲ್ಲಿಯೂ ತೀವ್ರ ಕೋಲಾಹಲಕ್ಕೆ ಕಾರಣವಾಗಿತ್ತು. ರಮೇಶ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳ ಕಾರಣ ಎಂಬ ದೂರುಗಳು ಕೇಳಿಬಂದಿವೆ ಎಂದು ಅಂದಿನ ವಿರೋಧ ಪಕ್ಷದ ನಾಯಕ, ಈಗಿನ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದರು.
ಇದನ್ನೂ ಓದಿ: Aishwarya Gowda: ವಂಚನೆ ಪ್ರಕರಣದಲ್ಲಿ ಐಶ್ವರ್ಯ ಗೌಡ 14 ದಿನ ಇಡಿ ಕಸ್ಟಡಿಗೆ