ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Transfer guidelines: ಕೌನ್ಸೆಲಿಂಗ್ ಮೂಲಕ ಗ್ರೂಪ್ ಸಿ, ಡಿ ನೌಕರರ ವರ್ಗಾವಣೆ ನಡೆಸಲು ಶಿಕ್ಷಣ ಇಲಾಖೆ ಸೂಚನೆ

Transfer guidelines: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಪಾರದರ್ಶಕಗೊಳಿಸಲು, ಆಡಳಿತಾತ್ಮಕ, ಸಾರ್ವಜನಿಕ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ನಿರ್ವಹಿಸುವ ಸಲುವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲು ರಾಜ್ಯ ಸರ್ಕಾರ ಕೈಗೊಂಡಿದೆ.

ಕೌನ್ಸೆಲಿಂಗ್ ಮೂಲಕ ನೌಕರರ ವರ್ಗಾವಣೆ ನಡೆಸಲು ಶಿಕ್ಷಣ ಇಲಾಖೆ ಸೂಚನೆ

Profile Prabhakara R Jun 2, 2025 11:04 PM

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು (Transfer guidelines ಕೌನ್ಸೆಲಿಂಗ್ ಮೂಲಕ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆದ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್‌ ಅವರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಅವರು, ಮೇ 12ರಂದು ಹೊರಡಿಸಿದ ಮಾರ್ಗಸೂಚಿಗಳನ್ವಯ ನೌಕರರ ವರ್ಗಾವಣೆಗೆ ಕ್ರಮ ಕೈಗೊಳ್ಳಬೇಕು. ವರ್ಗಾವಣೆಯನ್ನು ಪಾರದರ್ಶಕಗೊಳಿಸಲು, ಆಡಳಿತಾತ್ಮಕ, ಸಾರ್ವಜನಿಕ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ನಿರ್ವಹಿಸುವ ಸಲುವಾಗಿ ಹಾಗೂ ಎಲ್ಲರಿಗೂ ಸಮಾನ ಅವಕಾಶ ನೀಡುವ ನಿಟ್ಟಿನಲ್ಲಿ ಇಲಾಖಾ ಮುಖ್ಯಸ್ಥರ ಹಂತದಲ್ಲಿ ಕೌನ್ಸೆಲಿಂಗ್ ಪ್ರಕ್ರಿಯೆ ಮೂಲಕ ನಿರ್ವಹಿಸಲು ಸರ್ಕಾರವು ತೀರ್ಮಾನಿಸಿದೆ ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.

ವರ್ಗಾವಣೆಯನ್ನು ಕೌನ್ಸೆಲಿಂಗ್ ಪ್ರಕ್ರಿಯೆ ಮೂಲಕ ನಿರ್ವಹಿಸಲು ಈಗಾಗಲೇ ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತಾಲಯ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ಈ ತಂತ್ರಾಂಶವನ್ನು ಬಳಸಿ ಕಲಬುರಗಿ ಅಪರ ಆಯುಕ್ತರು ಹಾಗೂ ಧಾರವಾಡ ಅಪರ ಆಯುಕ್ತರು ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳಬೇಕು.

ಮುಂದುವರಿದು, ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಯಡಿ ಬರುವ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಸಾರ್ವಜನಿಕ ಗ್ರಂಥಾಲಯ ಇಲಾಖೆ ಮತ್ತು ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆಯ ಇಲಾಖಾ ಮುಖ್ಯಸ್ಥರುಗಳು ಸಹ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಆನ್‌ಲೈನ್ ಮುಖಾಂತರ ಪಾರದರ್ಶಕವಾಗಿ ನಡೆಸಬೇಕು.

ಈ ಸುದ್ದಿಯನ್ನೂ ಓದಿ | Teachers Transfer: ಶಿಕ್ಷಕರ ವರ್ಗಾವಣೆ; ಶಿಕ್ಷಣ ಇಲಾಖೆಯಿಂದ ಅಧಿಸೂಚನೆ ಪ್ರಕಟ

ಈ ಕೂಡಲೇ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಗೆ ಸಂಬಂಧಪಟ್ಟ ವೇಳಾಪಟ್ಟಿಯನ್ನು ಸಂಬಂಧಪಟ್ಟ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಕೌನ್ಸೆಲಿಂಗ್ ಪ್ರಕ್ರಿಯೆ ಮುಗಿದ ಕೂಡಲೇ ಅಲ್ಲಿಯೇ ವರ್ಗಾವಣೆ ಆದೇಶ ನೀಡಬೇಕು ಎಂದು ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.