Greater Bengaluru: ಗ್ರೇಟರ್ ಬೆಂಗಳೂರಿಗೆ ಮೀಸಲಾತಿ ಪ್ರಕಟಿಸಿ ಶೀಘ್ರದಲ್ಲೇ ಚುನಾವಣೆ: ಡಿಸಿಎಂ ಡಿಕೆಶಿ
Greater Bengaluru: ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದ್ದು, ಮುಂದಿನ 4 ತಿಂಗಳಲ್ಲಿ ಶೀಘ್ರ ಚುನಾವಣೆ ಮಾಡಲಾಗುವುದು. ಇದರ ಸಂಬಂಧ ಎಲ್ಲಾ ಪಕ್ಷಗಳ ಮುಖಂಡರ ಸಭೆ ಕರೆಯಲಾಗುವುದು. ಎಲ್ಲರ ಸಲಹೆಗಳನ್ನು ಪಡೆದು ಗ್ರೇಟರ್ ಬೆಂಗಳೂರು ರಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


ಮೈಸೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ವಾಗಿ (Greater Bengaluru) ಬದಲಾವಣೆ ಆಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಗ್ರೇಟರ್ ಬೆಂಗಳೂರಿಗೆ ಶೀಘ್ರದಲ್ಲೇ ಮೀಸಲಾತಿ ಪ್ರಕಟಿಸಿ, ವಿಭಾಗಗಳನ್ನು ವಿಂಗಡಿಸಿ ಆದಷ್ಟು ಬೇಗ ಚುನಾವಣೆ ನಡೆಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮುಂದಿನ 4 ತಿಂಗಳಲ್ಲಿ ತಡಮಾಡದೇ, ಬೇಗ ಚುನಾವಣೆ ಮಾಡಲಾಗುವುದು. ಇದರ ಸಂಬಂಧ ಎಲ್ಲಾ ಪಕ್ಷಗಳ ಮುಖಂಡರ ಸಭೆ ಕರೆಯಲಾಗುವುದು. ಗ್ರೇಟರ್ ಬೆಂಗಳೂರು ರಚನೆಗೆ ಎಲ್ಲಾ ಪಕ್ಷದವರು ಸಲಹೆ, ಸೂಚನೆ ನೀಡಿದ್ದಾರೆ. ಎಲ್ಲರ ಸಲಹೆಗಳನ್ನು ಪಡೆದು ಗ್ರೇಟರ್ ಬೆಂಗಳೂರು ರಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Greater Bengaluru: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ; ಇಂದಿನಿಂದ ಜಾರಿ
ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆ
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ (Greater Bengaluru Governance Bill 2024) ರಾಜ್ಯಪಾಲರ ಅಂಕಿತ ದೊರೆತಿದ್ದು, ಮೇ 15ರಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ತಿಳಿಸಿದ್ದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ್ದ ಅವರು, ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.
ರಾಜ್ಯ ರಾಜಧಾನಿ ಬೆಂಗಳೂರಿನ ಮಹಾನಗರ ಪಾಲಿಕೆ BBMP ಯುಗಾಂತ್ಯಗೊಂಡಿದ್ದು, ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ಶುರು ಮಾಡಲಿದೆ. ಅಷ್ಟೇ ಅಲ್ಲದೇ ಆಡಳಿತದಲ್ಲೂ ಹತ್ತು ಹಲವು ಬದಲಾವಣೆಗಳೂ ಆಗಲಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯಾಚರಣೆ ನಿನ್ನೆದ ಮುಕ್ತಾಯಗೊಂಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ನಿನ್ನೆ GBAಗೆ ಅಧಿಕೃತ ಅಧಿಸೂಚನೆ ಹೊರಡಿಸಿತ್ತು. ಇಂದಿನಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಬಿಬಿಎಂಪಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಿಕೊಳ್ಳಲು ಅವಕಾಶ ಇದೆ. ಹಾಲಿ ಇರುವ 709 ಚದರ ಕಿಲೋ ಮೀಟರ್‌ನಿಂದ 1 ಸಾವಿರ ಚದರ ಕಿ.ಮೀ ವ್ಯಾಪ್ತಿಗೆ GBA ವಿಸ್ತರಣೆ ಮಾಡಲಾಗುತ್ತಿದೆ. GBAಗೆ ಬಿಬಿಎಂಪಿ ಅಧೀನದಲ್ಲಿದ್ದ ಪ್ರದೇಶಗಳ ಜತೆಗೆ ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿರುವ ಸಾಕಷ್ಟು ಪ್ರದೇಶಗಳೂ ಸೇರ್ಪಡೆ ಆಗಿವೆ.
ಮೂರು ಪಾಲಿಕೆಗಳ ರಚನೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆ ರಚನೆ ಮಾಡಲು ನಿರ್ಧರಿಸಲಾಗಿದೆ. ಮೂರು ಪಾಲಿಕೆಗಳನ್ನಾಗಿ ವಿಂಗಡನೆ ಮಾಡಲು ಮುಂದಾಗಿದ್ದು, ಪ್ರತಿ ಪಾಲಿಕೆಯಲ್ಲಿಮ125 ವಾರ್ಡ್‌ಗಳಿರುತ್ತವೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ ಮತ್ತು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಹೀಗೆ ಮೂರು ಪಾಲಿಕೆಗಳು ಕಾರ್ಯನಿರ್ವಹಿಸಲಿವೆ.
ಆಡಳಿತದಲ್ಲಿ ಮತ್ತೆ ಬೇರೇನು ಬದಲಾಗಲಿವೆ?
- ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಮುಖ್ಯಮಂತ್ರಿಗಳೇ ಅಧ್ಯಕ್ಷರು
- ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಉಪಾಧ್ಯಕ್ಷರಾಗಿ ಬೆಂಗಳೂರು ಅಭಿವೃದ್ಧಿ ಸಚಿವರು ಕಾರ್ಯ ನಿರ್ವಹಣೆ
- ತಲಾ 125 ವಾರ್ಡ್‌ಗಳನ್ನು ಒಳಗೊಂಡ ಮೂರು ನಗರ ಪಾಲಿಕೆ
- ಪ್ರತಿ ಪಾಲಿಕೆಗೂ ಗ್ರೇಟರ್ ಬೆಂಗಳೂರು ಪ್ರದೇಶದ ಗಡಿ ನಿಗಧಿ
- ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಜಿಗಣಿ ಕೈಗಾರಿಕೆ ಪ್ರದೇಶ ಬೊಮ್ಮಸಂದ್ರ, ಸರ್ಜಾಪುರ, ಬಾಗಲೂರು, ರಾಜಾನುಕುಂಟೆ, ಹೆಸರಘಟ್ಟ, ದಾಸನಪುರ ಸೇರ್ಪಡೆ ಮಾಕಳಿ, ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯೂ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ
- ಗ್ರೇಟರ್ ಬೆಂಗಳೂರು ಕಟ್ಟಡಗಳ ಗಾತ್ರ, ಎತ್ತರ ನಿಯಮಗಳು ಬದಲು ಸಾಧ್ಯತೆ
- ವಸತಿ ಕಟ್ಟಡಗಳಿಗೆ ಶೇ. 50ರಷ್ಟು & ವಾಣಿಜ್ಯ ಕಟ್ಟಡಗಳಿಗೆ ಶೇ. 25ರಷ್ಟು ಕಡಿತ ತರುವ ಸಾಧ್ಯತೆ