ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಗ್ಯಾರಂಟಿ ಯೋಜನೆ ನಿಲ್ಲುತ್ತಾ? ಮಹತ್ವದ ಅಪ್‌ಡೇಟ್‌ ಕೊಟ್ರು ಡಿಸಿಎಂ ಡಿ.ಕೆ. ಶಿವಕುಮಾರ್

DK Shivakumar: ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದ್ದರೂ ನಾವು ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದೇವೆ. ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ ಅವರು ಪ್ರತಿಕ್ರಿಯಿಸಿದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಲೇಟೆಸ್ಟ್‌ ಅಪ್‌ಡೇಟ್‌ ಕೊಟ್ಟ ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -

Profile
Siddalinga Swamy Feb 26, 2026 9:18 PM

ಬೆಂಗಳೂರು, ಫೆ. 26: ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದರೂ ನಾವು ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದೇವೆ. ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಸಂಜೆ ಅವರು ಪ್ರತಿಕ್ರಿಯೆ ನೀಡಿದರು.

ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, ಉದಾಹರಣೆಗೆ ಮೃತಪಟ್ಟಿರುವ ಕೆಲವರಿಗೆ ಗ್ಯಾರಂಟಿ ಯೋಜನೆಯ ಹಣ ಸಂದಾಯವಾಗಿದೆ. ಪಡಿತರ ಅಕ್ಕಿಯನ್ನೂ ಸಹ ಮೃತಪಟ್ಟಿರುವವರ ಹೆಸರಿನಲ್ಲಿ ಪಡೆಯಲಾಗುತ್ತಿದೆ. ಗೃಹಜ್ಯೋತಿಯಲ್ಲಿ ಈ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿದರು.

ಮೃತಪಟ್ಟಿರುವವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ತೆಗೆದುಕೊಳ್ಳಲಾಗಿದೆ. ಈ ರೀತಿ ದುರುಪಯೋಗವಾಗುವುದನ್ನು ತಪ್ಪಿಸಬೇಕು. ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕು ಎಂದು ಸರ್ಕಾರ ಚರ್ಚೆ ಮಾಡುತ್ತಿದೆ ಎಂದರು.

ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ವಿಚಾರ ಚರ್ಚೆಯಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಸ್ಥಿತಿವಂತರು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯಬೇಡಿ ಎನ್ನುವ ಸಲಹೆಯ ಬಗ್ಗೆ ಕೇಳಿದಾಗ, ಇದರ ಬಗ್ಗೆ ನೋಡೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.