ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹೋದರಿ ಜವರಮ್ಮ ನಿಧನ
Former PM HD Deve Gowda: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಸಹೋದರಿ ಜವರಮ್ಮ (88) ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು. ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಜವರಮ್ಮ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಎಚ್.ಡಿ. ದೇವೇಗೌಡ ಅವರ ಸಹೋದರಿ ಜವರಮ್ಮ (ಸಂಗ್ರಹ ಚಿತ್ರ) -
ಹಾಸನ, ಮಾ. 19: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ (H.D. Deve Gowda) ಅವರ ಸಹೋದರಿ ಜವರಮ್ಮ (Javaramma) ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರು ನಿಧನರಾದರು. ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಜವರಮ್ಮ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಕುಟುಂಬಸ್ಥರು ತಿಳಿಸಿದ್ದಾರೆ.
ಜವರಮ್ಮ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಸವನಾಯಕನಹಳ್ಳಿ ಗ್ರಾಮದದಲ್ಲಿ ವಾಸವಾಗಿದ್ದರು. ಅವರ ನಿಧನಕ್ಕೆ ದೇವೇಗೌಡ ಕಂಬನಿ ಮಿಡಿದಿದ್ದಾರೆ. ದೇವೇಗೌಡ ಸಹೋದರಿಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದರು.
ರಾಜಕೀಯವಾಗಿ ಎಷ್ಟೇ ದೊಡ್ಡ ಮಟ್ಟಕ್ಕೆ ಬೆಳೆದಿದ್ದರೂ ದೇವೇಗೌಡ ಹಳ್ಳಿಯ ಸೊಗಡು ಮತ್ತು ಕುಟುಂಬದ ಬಾಂಧವ್ಯವನ್ನು ಎಂದಿಗೂ ಮರೆತಿರಲಿಲ್ಲ. ಅದರಲ್ಲೂ ತಂಗಿ ಜವರಮ್ಮ ಅವರ ಮೇಲೆ ವಿಶೇಷ ಪ್ರೀತಿ ಇತ್ತು. ತಮ್ಮ ತಂಗಿಯ ಅಗಲಿಕೆಗೆ ಅವರಿಗೆ ತೀವ್ರ ಆಘಾತ ತಂದಿದ್ದು, ಕಂಬನಿ ಮಿಡಿದಿದ್ದಾರೆ. ಕುಟುಂಬದ ಸದಸ್ಯರು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಸಾಂತ್ವನ ಹೇಳಿದ್ದಾರೆ.
ಸರಳ ಜೀವನ ನಡೆಸುತ್ತಿದ್ದ ಜವರಮ್ಮ, ದೇವೇಗೌಡ ರಾಜಕೀಯ ಏಳುಬೀಳುಗಳ ಸಂದರ್ಭದಲ್ಲಿ ಕುಟುಂಬಕ್ಕೆ ನೈತಿಕ ಬೆಂಬಲವಾಗಿ ನಿಂತಿದ್ದರು. ಎಚ್.ಡಿ. ರೇವಣ್ಣ ಮತ್ತು ಎಚ್.ಡಿ. ಕುಮಾರಸ್ವಾಮಿ ಕೂಡ ಅತ್ತೆಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಜೆಡಿಎಸ್ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ದೇವೇಗೌಡ ಅವರ ಕುಟುಂಬದ ಬೆಂಬಲಕ್ಕೆ ಧಾವಿಸಿದ್ದಾರೆ.
ಕಾಂಗ್ರೆಸ್ ಜತೆಗಿನದ್ದು 'ಬಲವಂತದ ಮದುವೆ'; ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ದೇವೇಗೌಡ ತಿರುಗೇಟು
ರಾಜ್ಯಸಭೆಯಿಂದ ನಿವೃತ್ತಿ
ದೇವೇಗೌಡ ಸೇರಿದಂತೆ 59 ರಾಜ್ಯಸಭಾ ಸದಸ್ಯರು ನಿವೃತ್ತರಾಗಿದ್ದು, ಬುಧವಾರ (ಮಾರ್ಚ್ 18) ಅವರಿಗೆ ಗೌರವಪೂರ್ವಕ ಬೀಳ್ಕೊಡುಗೆ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಎಲ್ಲ ಸದಸ್ಯರಿಗೆ ನೆನಪಿನ ಸ್ಮರಣಿಕೆ ನೀಡಿದರು. ನಿವೃತ್ತ ಪ್ರಮುಖರದಲ್ಲಿ ಎಚ್.ಡಿ. ದೇವೇಗೌಡ ಅವರೊಂದಿಗೆ ಎನ್‌ಸಿಪಿ ನಾಯಕ ಶರದ್ ಪವರ್ ಸೇರಿದಂತೆ ಹಲವು ಪ್ರಮುಖ ನಾಯಕರಿದ್ದಾರೆ. ಎಲ್ಲರ ಕೊಡುಗೆಯನ್ನು ಈ ವೇಳೆ ಮೋದಿ ನೆನಪಿಸಿಕೊಂಡರು.