ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕಾಂಗ್ರೆಸ್ ಭವನ ಶಂಕುಸ್ಥಾಪನೆ ನಡೆಯೋದಿಲ್ಲ, ಇಂದು ಸಚಿವರ ಪಟ್ಟಿಬಿಡುಗಡೆ: ಡಿ.ಕೆ. ಶಿವಕುಮಾರ್

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬಳಿಕ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ಸಚಿವರ ಪಟ್ಟಿ ಬುಧವಾರ ಮಧ್ಯಾಹ್ನದೊಳಗೆ ಬಿಡುಗಡೆಯಾಗಲಿದೆ. ಈಗಾಗಲೇ ಮಾಧ್ಯಮಗಳಲ್ಲಿ ಕೆಲವು ಹೆಸರುಗಳು ಪ್ರಕಟವಾಗಿದ್ದು, ಇದು ಅಧಿಕೃತವಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್ ಭವನ ಶಂಕುಸ್ಥಾಪನೆ ಬುಧವಾರ ಸಂಜೆ ನಡೆಯುವುದಿಲ್ಲ ಎಂದು ಕೂಡ ಅವರು ಸ್ಪಷ್ಟಪಡಿಸಿದ್ದಾರೆ.

ಇಂದು ಸಚಿವರ ಪಟ್ಟಿ ಪ್ರಕಟ: ಡಿ.ಕೆ. ಶಿವಕುಮಾರ್

ಸಂಗ್ರಹ ಚಿತ್ರ -

ಬೆಂಗಳೂರು: ರಾಜ್ಯದ ನೂತನ ಸಚಿವರ ಪಟ್ಟಿ (Minister listy) ಇಂದು ಮಧ್ಯಾಹ್ನದೊಳಗೆ ಬಿಡುಗಡೆ ಮಾಡುವುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ (Congress Legislature Party Leader) ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದ್ದಾರೆ. ಕಳೆದ ವಾರ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬಳಿಕ ಎಲ್ಲರ ಕುತೂಹಲ ಕೆರಳಿಸಿರುವ ಸಚಿವರ ಪಟ್ಟಿ ಬುಧವಾರ ಮಧ್ಯಾಹ್ನದ ವೇಳೆಗೆ ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಲಿದೆ. ಈ ಮೂಲಕ ಎಲ್ಲಾ ಉಹಾಪೋಹಗಳಿಗೂ ತೆರೆ ಬೀಳುವ ಸಾಧ್ಯತೆ ಇದೆ. ಕೆಲವರ ಹೆಸರುಗಳು ಈಗಾಗಲೇ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಇದು ಯಾವುದು ಅಧಿಕೃತವಲ್ಲ ಎಂಬುದಾಗಿ ಕೂಡ ಅವರು ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ.ಬುಧವಾರ ಮಧ್ಯಾಹ್ನದ ವೇಳೆಗೆ ಹೈಕಮಾಂಡ್ ನಾಯಕರು ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.

World Milk Day: 1 ಲಕ್ಷ 50 ಸಾವಿರ ಲೀಟರ್ ಹಾಲು ಉತ್ಪಾದನೆಯ ಶ್ರೇಯ ಶ್ರಮಜೀವಿ ಮಹಿಳೆಯರಿಗೆ ಸಲ್ಲಬೇಕು : ಊಲವಾಡಿ ಅಶ್ವತ್ಥನಾರಾಯಣ

ಸಚಿವರ ಆಯ್ಕೆ ಕುರಿತು ಹೈಕಮಾಂಡ್ ನಾಯಕರು ಚರ್ಚೆ ನಡೆಸಿದ್ದಾರೆ. ನಾವು ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ. ಅಂತಿಮ ತೀರ್ಮಾನವನ್ನು ಹೈಕಮಾಂಡ್ ನಾಯಕರು ಮಾಡಲಿದ್ದಾರೆ. ದೆಹಲಿ ನಾಯಕರು ನಮಗೆ ಪಟ್ಟಿ ರವಾನೆ ಮಾಡಿದ ಬಳಿಕ, ನಾವು ಅದನ್ನು ರಾಜಭವನಕ್ಕೆ ಕಳುಹಿಸಿಕೊಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಭವನ ಶಂಕುಸ್ಥಾಪನೆ ಇಲ್ಲ

ಬುಧವಾರ ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಬೇರೊಂದು ದಿನ ನಡೆಸಲು ತೀರ್ಮಾನಿಸಿದ್ದೇವೆ. ಆಹ್ವಾನ ಪತ್ರಿಕೆ ಪಡೆದಿರುವ ಬ್ಲಾಕ್, ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ಯಾರಂಟಿ ಸಮಿತಿಯವರು ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನಕ್ಕೆ ಆಗಮಿಸಬೇಕು ಎಂದರು.

Siddaramaiah: ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ ನೀಡಿದ ಕಾಂಗ್ರೆಸ್ ಹೈಕಮಾಂಡ್

ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಲೋಕ ಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೀಳ್ಕೊಟ್ಟು ಭಾರತ ಜೋಡೋ ಭವನದಲ್ಲಿ ಭೇಟಿ ಎಲ್ಲರನ್ನೂ ಭೇಟಿ ಮಾಡುವುದಾಗಿ ಅವರು ಹೇಳಿದರು.