ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಲಕ್ಕುಂಡಿ ಉತ್ಖನನದ ವೇಳೆಯಲ್ಲಿ ದೊಡ್ಡ ಹಾವು ಪತ್ತೆ! ಬೆಚ್ಚಿ ಬಿದ್ದ ಅಧಿಕಾರಿಗಳು

ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ವಿಚಾರ ದೇಶಾದ್ಯಂತ ಸುದ್ದಿಯಾಗಿತ್ತು. ಸಿಕ್ಕ ಆಭರಣಗಳನ್ನು ಕುಟುಂಬ ಸರ್ಕಾರಕ್ಕೆ ಹಸ್ತಾಂತರಿಸಿದ ಬಳಿಕ ಗ್ರಾಮದಲ್ಲಿ ಉತ್ಖನನ ಕಾರ್ಯವನ್ನು ಆರಂಭಿಸಲಾಗಿತ್ತು. ಇದೀಗ ಅದೇ ಜಾಗದಲ್ಲಿ ದೊಡ್ಡ ಹಾವೊಂದು ಕಾಣಿಸಿಕೊಂಡಿದ್ದು, ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಲಕ್ಕುಂಡಿ ಉತ್ಖನನದ ವೇಳೆಯಲ್ಲಿ ದೊಡ್ಡ ಹಾವು ಪತ್ತೆ!

ಲಕ್ಕುಂಡಿ -

Vishakha Bhat
Vishakha Bhat Jan 18, 2026 10:22 AM

ಗದಗ: ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ವಿಚಾರ ದೇಶಾದ್ಯಂತ ಸುದ್ದಿಯಾಗಿತ್ತು. ಸಿಕ್ಕ ಆಭರಣಗಳನ್ನು ಕುಟುಂಬ ಸರ್ಕಾರಕ್ಕೆ ಹಸ್ತಾಂತರಿಸಿದ ಬಳಿಕ ಗ್ರಾಮದಲ್ಲಿ ಉತ್ಖನನ ಕಾರ್ಯವನ್ನು (Lakkundi excavation) ಆರಂಭಿಸಲಾಗಿತ್ತು. ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ವಿಚಾರ ದೇಶಾದ್ಯಂತ ಸುದ್ದಿಯಾಗಿತ್ತು. ಸಿಕ್ಕ ಆಭರಣಗಳನ್ನು ಕುಟುಂಬ ಸರ್ಕಾರಕ್ಕೆ ಹಸ್ತಾಂತರಿಸಿದ ಬಳಿಕ ಗ್ರಾಮದಲ್ಲಿ ಉತ್ಖನನ ಕಾರ್ಯವನ್ನು ಆರಂಭಿಸಲಾಗಿತ್ತು. ಅದರ ಭಾಗವಾಗಿ ಇಂದು ಕೋಟೆ ವೀರಭದ್ರೇಶ್ವರ ದೇವಸ್ಥಾನ ಬಳಿಯ ಆವರಣದಲ್ಲಿ ಮೂರನೇ ದಿನದ ಉತ್ಖನನದ ವೇಳೆ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಉತ್ಖನನ ಕಾರ್ಯವನ್ನು ನಡೆಸುವಾಗ ಹಾವೊಂದು ಇದೀಗ ಕಾಣಿಸಿಕೊಂಡಿದೆ.

ಗ್ರಾಮದಲ್ಲಿ ಮಳೆಗಾಲದಲ್ಲಿ ಹಿಂದೆಲ್ಲ ಮಣ್ಣು ಅಗೆಯುವಾಗ ಚಿನ್ನದ ತುಂಡುಗಳು ಕಾಣಿಸುತ್ತಿದ್ದವು. ಇಲ್ಲಿ ಎಲ್ಲೇ ಅಗೆದರೂ ಬಂಗಾರ ಸಿಗುತ್ತಿತ್ತು. ಆದರೆ, ಈ ನಿಧಿ ಆಸೆಯ ಹಿಂದೆ ಹೋದವರು ರಕ್ತಕಾರಿ ಸತ್ತಿದ್ದಾರೆ ಎಂದು ಗ್ರಾಮಸ್ಥರು ಈ ಹಿಂದೆ ಹೇಳಿದ್ದರು. ನಿಧಿಯನ್ನು ಸರ್ಪ ಕಾಯುತ್ತೆ. ಹೀಗಾಗಿ ಅದರ ತಂಟೆಗೆ ಯಾರೂ ಹೋಗಬಾರದು ಎಂಬ ಅಭಿಪ್ರಾಯಗಳು ಕೆಳಿಬಂದಿದ್ದವು. ಈ ನಡುವೆ ಈಗ ಉತ್ಖನನದ ವೇಳೆ ಹಾವು ಪ್ರತ್ಯಕ್ಷವಾಗಿರೋದು ಗ್ರಾಮಸ್ಥರ ಆತಂಕ ಹೆಚ್ಚಿಸಿದೆ. ಹಾವು ನೋಡಿ ಜೆಸಿಬಿ ಚಾಲಕ ಗಾಬರಿ ಆಗಿದ್ದಾನೆ.

ಶನಿವಾರ ಬೆಳಗ್ಗೆ 8 ಗಂಟೆಯಿಂದಲೇ 10 ಚದರ ಮೀಟರ್ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ ಸ್ಥಳದಲ್ಲಿ ಉತ್ಖನನ ಕೆಲಸ ನಡೆಯಿತು. ಕೆಲಸ ಆರಂಭವಾದ ಕೆಲವೇ ಗಂಟೆಗಳಲ್ಲಿ ಶಿವಲಿಂಗದ ಪೀಠ ಹಾಗೂ ಪಾನಿಬಟ್ಟಲು (ನೀರಿನ ಬಟ್ಟಲು) ಮಾದರಿಯ ಪ್ರಾಚೀನ ವಸ್ತುಗಳು ಪತ್ತೆಯಾಗಿವೆ. ಇದು ಸ್ಥಳೀಯರಲ್ಲಿ ಹಾಗೂ ಪುರಾತತ್ವ ಶಾಸ್ತ್ರಜ್ಞರಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಭೂಗರ್ಭದಲ್ಲಿ ಇನ್ನೂ ದೊಡ್ಡ ಮಟ್ಟದ ಐತಿಹಾಸಿಕ ದಾಖಲೆಗಳು, ಶಿಲಾಕೃತಿಗಳು ಇರುವ ಸಾಧ್ಯತೆಯನ್ನು ಪುಷ್ಟೀಕರಿಸಿದೆ. ಉತ್ಖನನ ನಡೆಯುವ ಪ್ರದೇಶವನ್ನು ಅತ್ಯಂತ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲಾಗಿದೆ. ಪುರಾತತ್ವ ಇಲಾಖೆಯ ಶಿಫಾರಸಿನ ಮೇರೆಗೆ ಉತ್ಖನನ ಜಾಗಕ್ಕೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೆ, ಫೋಟೋ ಮತ್ತು ವಿಡಿಯೋಗ್ರಾಫಿ ಮಾಡುವುದಕ್ಕೂ ತಡೆ ನೀಡಲಾಗಿದೆ.

ಉತ್ಖನನಕ್ಕೆ ಗ್ರಾಮಸ್ಥರ ಆಕ್ರೋಶ

ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನದಿಂದ ಕೋಟೆ ವೀರಭದ್ರೇಶ್ವರ ದೇವರ ಜಾತ್ರೆಗೆ ಅಡಚಣೆ ಉಂಟಾಗುತ್ತದೆ ಎಂದು ಲಕ್ಕುಂಡಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೀರಭದ್ರೇಶ್ವರ ಜಾತ್ರೆ ನಿಂತರೆ ಊರಿಗೆ ಕೇಡಾಗುತ್ತದೆ ಎಂದು ಗ್ರಾಮಸ್ಥರು ಕೆಂಡಾಮಂಡಲರಾಗಿದ್ದಾರೆ.