SIR ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವು
SIR ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೆವಾಡಿ ಗ್ರಾಮದಲ್ಲಿ ನಡೆದಿದೆ. ಗದಗ ಜಿಲ್ಲೆ ಬಾಗೆವಾಡಿಯ ರತ್ನಮ್ಮ ಬಳಿಗಾರ (43) ಮೃತ ಮಹಿಳೆ. ಎಸ್‌ಐಆರ್ ಹಿನ್ನೆಲೆ ರತ್ನಮ್ಮ ಬಿಎಲ್‌ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸಂಗ್ರಹ ಚಿತ್ರ -
ಗದಗ: SIR ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೆವಾಡಿ ಗ್ರಾಮದಲ್ಲಿ ನಡೆದಿದೆ. ಗದಗ ಜಿಲ್ಲೆ ಬಾಗೆವಾಡಿಯ ರತ್ನಮ್ಮ ಬಳಿಗಾರ (43) ಮೃತ ಮಹಿಳೆ. ಎಸ್‌ಐಆರ್ ಹಿನ್ನೆಲೆ ರತ್ನಮ್ಮ ಬಿಎಲ್‌ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ವೇಳೆ ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಗ್ರಾಮಕ್ಕೆ ಭೇಟಿ ಕೊಟ್ಟಿದ್ದರು.
ಈ ವೇಳೆ ಎಸ್‌ಐಆರ್ ಪ್ರಗತಿ ಪರಿಶೀಲನೆ ನಡೆಸಿದ್ದರು. ಗ್ರಾಮದ ಮಹೇಶಗೌಡ ಪಾಟೀಲ ಎಂಬವರ ಮನೆಯಲ್ಲಿ ಶಾಸಕರು ಹಾಗೂ ಸಿಬ್ಬಂದಿಗೆ ಚಹಾ ವ್ಯವಸ್ಥೆ ಮಾಡಲಾಗಿತ್ತು. ಸಭೆ ಬಳಿಕ ಚಹಾ ಕುಡಿಯುವ ಸಂದರ್ಭ ರತ್ನಮ್ಮ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ರತ್ನಮ್ಮ ಮೃತಪಟ್ಟಿದ್ದಾರೆ. ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತಾಲೂಕು ಆಸ್ಪತ್ರೆಗೆ ಮುಂಡರಗಿ ತಹಶಿಲ್ದಾರ್ ರ‍್ರಿಸ್ವಾಮಿ ಭೇಟಿ ನೀಡಿದ್ದಾರೆ. ಗದಗ ಜಿಲ್ಲೆ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕೊಡಚಾದ್ರಿ ಚಾರಣಕ್ಕೆ ಬಂದವ ಸಾವು
ಸ್ನೇಹಿತರ ಜೊತೆ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆ ಸಮೀಪದ ಕಟ್ಟಿನಹೊಳೆ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಶ್ರೀಕಾಂತ್ (28) ಮೃತ ದುರ್ದೈವಿ. ಮೂವರು ಸ್ನೇಹಿತರೊಂದಿಗೆ ಕೊಡಚಾದ್ರಿ ಪ್ರವಾಸಕ್ಕೆ ಶುಕ್ರವಾರ ತೆರಳಿ, ಕಟ್ಟಿನಹೊಳೆ ಗ್ರಾಮದ ಸ್ನೇಹಿತನ ಮನೆಯಲ್ಲಿ ಶ್ರೀಕಾಂತ್ ತಂಗಿದ್ದರು. ಶನಿವಾರ ಗೆಳೆಯರೆಲ್ಲರೂ ಕೂಡಿ ಬೆಳಗ್ಗೆ ಕೊಡಚಾದ್ರಿ ಶಿಖರಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದರು.
Bengaluru Lift Tragedy: ಬೆಂಗಳೂರಿನಲ್ಲಿ ಘೋರ ಘಟನೆ; ಲಿಫ್ಟ್ ಡೋರ್‌ನಲ್ಲಿ ತಲೆ ಸಿಲುಕಿ ಯುವಕ ಸಾವು
ರಾತ್ರಿ ಏಕಾಏಕಿ ಶ್ರೀಕಾಂತ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ನೇಹಿತರು ಆತನನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮೊದಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.