ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Street dog attack: ಬೀದಿನಾಯಿಗಳ ದಾಳಿಗೆ ಗಜೇಂದ್ರಗಡದಲ್ಲಿ ಮಹಿಳೆ ಬಲಿ

Street dog attack: ಹೂವು ತರಲು ಹೋಗಿದ್ದಾಗ ಪ್ರೇಮವ್ವ ಮೇಲೆ ಬೀದಿನಾಯಿಗಳು ಗುಂಪಾಗಿ ದಾಳಿ ಮಾಡಿದ್ದು, ತೀವ್ರವಾಗಿ ಘಾಸಿಗೊಳಿಸಿದ್ದವು. ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಪ್ರೇಮವ್ವ ಸಾವನ್ನಪ್ಪಿದ್ದಾರೆ. ಗಜೇಂದ್ರಗಡ (Gadag news) ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ಬೀದಿನಾಯಿಗಳ ದಾಳಿಗೆ ಗಜೇಂದ್ರಗಡದಲ್ಲಿ ಮಹಿಳೆ ಬಲಿ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ May 11, 2025 11:04 AM

ಗದಗ: ಬೀದಿ ನಾಯಿಗಳ ದಾಳಿಗೆ (Street dog attack) ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಗಜೇಂದ್ರಗಡ ಪಟ್ಟಣದಲ್ಲಿ ಬೀದಿ ನಾಯಿಗಳು ಅಟ್ಯಾಕ್‌ ಮಾಡಿ ಮಹಿಳೆಯೊಬ್ಬರನ್ನು ಬಲಿ (Woman death) ಪಡೆದಿವೆ. ಪ್ರೇಮವ್ವ ಚೋಳಿನ (52) ಸಾವನ್ನಪ್ಪಿರುವ ಮಹಿಳೆ ಎಂದು ಗುರುತಿಸಲಾಗಿದೆ. ಹೂವು ತರಲು ಹೋಗಿದ್ದಾಗ ಪ್ರೇಮವ್ವ ಮೇಲೆ ಬೀದಿನಾಯಿಗಳು ಗುಂಪಾಗಿ ದಾಳಿ ಮಾಡಿದ್ದು, ತೀವ್ರವಾಗಿ ಘಾಸಿಗೊಳಿಸಿದ್ದವು. ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಪ್ರೇಮವ್ವ ಸಾವನ್ನಪ್ಪಿದ್ದಾರೆ. ಗಜೇಂದ್ರಗಡ (Gadag news) ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ಬೀದಿನಾಯಿಗಳ ದಾಳಿಗೆ ಮಕ್ಕಳು ಬಲಿಯಾಗುವ ಪ್ರಕರಣಗಳು ರಾಜ್ಯದಲ್ಲಿ ಇದುವರೆಗೆ ಹಲವು ನಡೆದಿವೆ. ಬೀದಿನಾಯಿಗಳಿಗೆ ಮಾಂಸದ ತ್ಯಾಜ್ಯ ಸುಲಭವಾಗಿ ದೊರೆಯುತ್ತಿರುವುದರಿಂದ ಅವು ಕೊಬ್ಬಿವೆ. ಅವು ಸಿಗದೆ ಹೋದಾಗ ಮನುಷ್ಯರ ಮೇಲೆ ದಾಳಿ ನಡೆಸುತ್ತಿವೆ. ಇವುಗಳ ಸಂಖ್ಯೆ ಅಕ್ಷಯವಾಗಿ ವೃದ್ಧಿಸಿದ್ದು, ಬೀದಿ ನಾಯಿಗಳ ಸಂತಾನಹರಣ ಪ್ರಕ್ರಿಯೆ ನಗರ ಆಡಳಿತದಿಂದ ಸರಿಯಾಗಿ ನಡೆಯುತ್ತಿಲ್ಲ ಎಂದು ನಾಗರಿಕರು ಆರೋಪಿಸಿದ್ದಾರೆ.

ಆಟವಾಡುತ್ತಿದ್ದ ಮಗು ಬಾವಿಗೆ ಬಿದ್ದು ಮೃತ್ಯು

ವಿಜಯಪುರ: ಆಟವಾಡುತ್ತಿದ್ದ ಮಗು ತೆರೆದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಮೂರು ವರ್ಷದ ಹರ್ಷಿತ್ ಪಾಟೀಲ್ ಬಾವಿಗೆ ಬಿದ್ದು ಮೃತಪಟ್ಟ ಮಗು. ಶುಕ್ರವಾರದಂದು ಮನೆಯಿಂದ ಮಗು ನಾಪತ್ತೆಯಾಗಿತ್ತು. ಮಗು ಎಲ್ಲಿದೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಕಂಗಾಲಾದ ಕುಟುಂಬಸ್ಥರು ಹರ್ಷಿತ್ ಹುಡುಕಾಟದಲ್ಲಿ ತೊಡಗಿದ್ದರು. ಇಂದು ಸ್ಥಳೀಯರು ಬಾವಿಯಲ್ಲಿ ಇಳಿದು ನೋಡಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ.

ಕುಟುಂಬಸ್ಥರು ಮಗುವನ್ನು ತೆರೆದ ಬಾವಿಯ ಆಸುಪಾಸಲ್ಲಿ ಆಡಲು ಬಿಟ್ಟಾಗ ಅನಾಹುತ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿಯಲ್ಲಿ ದೇಶವಿರೋಧಿ ಗೋಡೆಬರಹ; ವಿದ್ಯಾರ್ಥಿನಿಗಾಗಿ ಹುಡುಕಾಟ

ಉಡುಪಿ: ಉಡುಪಿ ಜಿಲ್ಲೆಯ (Udupi news) ಕಾರ್ಕಳ ತಾಲೂಕಿನ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ (Engineering College) ವಸತಿ ನಿಲಯದ ಗೋಡೆಯ ಮೇಲೆ ವಿದ್ಯಾರ್ಥಿನಿಯೊಬ್ಬಳು ʼಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್ʼ ಎಂದು ಗೋಡೆಯ ಮೇಲೆ ಬರೆದಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. "Hindustan nahi muslim sthan bola Muslim zindabad Hindu fuck off" ಎಂದು ವಿದ್ಯಾರ್ಥಿ ಬರೆದಿರುವ ಬರಹ ಈಗ ಎಲ್ಲರ ಕೋಪಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇಶ ವಿರೋಧಿ (Anti-national slogan) ಬರಹ ಬರೆದ ವಿದ್ಯಾರ್ಥಿನಿಗಾಗಿ ತೀವ್ರ ಶೋಧ ನಡೆಸಿದ್ದು, ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Hombale Films: ʼಕಾಂತಾರ ಚಾಪ್ಟರ್‌ 1ʼ ಚಿತ್ರದ ಜೂನಿಯರ್‌ ಆರ್ಟಿಸ್ಟ್‌ ಸಾವು; ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್‌