ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical abuse: ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ; ಸ್ನೇಹಿತರಿಂದಲೇ ಹೀನ ಕೃತ್ಯ!

Physical abuse: ಗದಗ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರೀತಿಯ ನಾಟಕವಾಡಿ ಬಾಲಕಿಯನ್ನು ಬಲೆಗೆ ಬೀಳಿಸಿಕೊಂಡಿದ್ದ ಯುವಕ, ತನ್ನ ಸ್ನೇಹಿತನ ಜತೆ ಸೇರಿ ಹೀನ ಕೃತ್ಯ ಎಸಗಿದ್ದಾನೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬಂಧಿಸಿದ್ದಾರೆ.

ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ

Profile Prabhakara R May 1, 2025 6:18 PM

ಗದಗ: ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಲಾಡ್ಜ್‌ಗೆ ಕರೆದುಕೊಂಡು ಹೋಗಿ ಇಬ್ಬರು ಸ್ನೇಹಿತರು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ (Physical abuse) ಗದಗ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರೀತಿಯ ನಾಟಕವಾಡಿ ಬಾಲಕಿಯನ್ನು ಬಲೆಗೆ ಬೀಳಿಸಿಕೊಂಡಿದ್ದ ಯುವಕ, ತನ್ನ ಸ್ನೇಹಿತನ ಜತೆ ಸೇರಿ ಹೀನ ಕೃತ್ಯ ಎಸಗಿದ್ದಾನೆ. ಏಪ್ರಿಲ್ ‌19 ರಂದು ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್​ಗೆ ಕರೆದುಕೊಂಡು ಹೋಗಿ ಇಬ್ಬರು ಸ್ನೇಹಿತರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಇನ್ನು ಸ್ನೇಹಿತ ಬಾಲಕಿ ಮೇಲೆ ಅತ್ಯಾಚಾರ ಎಸಗುವ ದೃಶ್ಯವನ್ನು ಮತ್ತೊಬ್ಬ ತನ್ನ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾನೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪ್ರಕರಣ ಬಯಲಿಗೆ ಬಂದಿದ್ದು, ಸದ್ಯ ಪೊಲೀಸರು, ಆರೋಪಿಗಳಾದ ಸಮೀರ್, ಉಮರ್ ಹಾಗೂ ಇವರಿಗೆ ಸಹಕರಿಸಿದ್ದ ಜಾಕೀರ್ ಹುಸೇನ್‌ ಎಂಬಾತನನ್ನು ಬಂಧಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದರಿಂದ ವಿಚಾರ ತಿಳಿದ ಪೋಷಕರು, ಗದಗ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸಂಬಂಧ ಗದಗ ಎಸ್‌ಪಿ ಬಿ.ಎಸ್.ನೇಮಗೌಡ ಅವರು ಪ್ರತಿಕ್ರಿಯಿಸಿ, ಅಪ್ರಾಪ್ತೆ ಹುಡುಗಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ ಸಮೀರ್, ಏಪ್ರಿಲ್ ‌19ರಂದು ಆಕೆಯನ್ನು ಪುಸಲಾಯಿಸಿ ಲಾಡ್ಜ್​​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಇದೇ ವೇಳೆ ಸಮೀರ್​ನ ಗೆಳೆಯ ಉಮರ್ ಸಹ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇನ್ನು ಜಾಕೀರ್ ಹುಸೇನ್ ಎನ್ನುವಾತ ಅತ್ಯಾಚಾರಿಗಳಾದ ಸಮೀರ್, ಉಮರ್​ಗೆ ಲಾಡ್ಜ್ ಬುಕ್ ಮಾಡಿ ಸಹಕರಿಸಿದ್ದ. ಸದ್ಯ ಪೋಕ್ಸೋ ಕಾಯ್ದೆಯಡಿ ಮೂವರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Anti National Post: ದೇಶ ವಿರೋಧಿ ಪೋಸ್ಟ್‌ ಮಾಡಿದ ಮಂಗಳೂರಿನ ವೈದ್ಯೆ ಕೆಲಸದಿಂದ ವಜಾ, ಕೇಸು

ಮಂಗಳೂರಿನಲ್ಲಿ ಮುಸ್ಲಿಂ ಯುವಕನ ಹತ್ಯೆ; ಇನ್ಸ್‌ಪೆಕ್ಟರ್‌ ಸೇರಿ ಮೂವರು ಸಸ್ಪೆಂಡ್

kudupu murder

ಮಂಗಳೂರು: ಮಂಗಳೂರಿನ (Mangaluru crime news) ಕುಡುಪು ಬಳಿ ನಡೆದಿದ್ದ ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣಕ್ಕೆ (Muslim youth murder case) ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. "ಪಾಕಿಸ್ತಾನ್‌ ಜಿಂದಾಬಾದ್‌ʼ (Pakistan Zindabad) ಎಂದದ್ದಕ್ಕಾಗಿ ಈ ವ್ಯಕ್ತಿಯನ್ನು ಸಾಯುವಂತೆ ಹೊಡೆಯಲಾಗಿತ್ತು ಎಂದು ಹೇಳಲಾಗಿದೆ. ಹೊಡೆತದಿಂದ ವ್ಯಕ್ತಿ ಸತ್ತೇ ಹೋಗಿದ್ದ. ಪ್ರಕರಣ ಮುಚ್ಚಿಹಾಕಲು ಈ ಪೊಲೀಸರು ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ.

ಕರ್ತವ್ಯ ಲೋಪ ಆರೋಪದಡಿ ಇನ್ಸ್‌ಪೆಕ್ಟರ್‌ ಶಿವಕುಮಾರ್, ಹೆಡ್ ಕಾನ್ಸ್‌ಟೇಬಲ್ ಚಂದ್ರ ಪಿ. ಮತ್ತು ಕಾನ್ಸ್‌ಟೇಬಲ್‌ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಮೂವರ ವಿರುದ್ಧ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಆರೋಪ ಕೇಳಿ ಬಂದಿತ್ತು. ಶಿವಕುಮಾರ್ ಆರಂಭದಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು. ವಿವಾದ ದೊಡ್ಡದಾದ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದರು. ಇದಾದ ಬಳಿಕ ಶಿವಕುಮಾರ್ ಅವರನ್ನು ಅಮಾನತು ಮಾಡುವಂತೆ ಗೃಹ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದರು.

ಪ್ರಕರಣದ ಹಿನ್ನೆಲೆ

ಏ.27ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಈ ಸಂದರ್ಭ ವಿಚಾರವೊಂದಕ್ಕೆ ಮೃತ ವ್ಯಕ್ತಿಗೆ ಅಲ್ಲಿದ್ದ ಸಚಿನ್ ಎಂಬಾತನೊಂದಿಗೆ ವಾಗ್ವಾದ ನಡೆದಿತ್ತು. ಈ ಸಂದರ್ಭ ಸಚಿನ್ ಆತನಿಗೆ ಥಳಿಸಿದ್ದು, ಬಳಿಕ ಅಲ್ಲಿದ್ದ 25ರಿಂದ 30 ಮಂದಿಯ ಗುಂಪು ಅಪರಿಚಿತ ವ್ಯಕ್ತಿಗೆ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾತದ್ವಾ ತುಳಿದು ಹಲ್ಲೆ ನಡೆಸಿದ್ದರು. ಈ ಸಂದರ್ಭ ಕೆಲವರು ತಡೆಯಲು ಯತ್ನಿಸಿದರೂ, ಆತನ ಮೇಲೆ ನಿರಂತರ ಹಲ್ಲೆ ನಡೆಸಿದ ಕಾರಣ ಗಂಭೀರವಾಗಿ ಗಾಯಗೊಂಡು ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದರು.‌

ಮೃತ ವ್ಯಕ್ತಿಯನ್ನು ಕೇರಳದ ವಯನಾಡು ಮೂಲದ ಮೊಹಮ್ಮದ್‌ ಅಶ್ರಫ್‌ ಎಂದು ಗುರುತಿಸಲಾಗಿದೆ. ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಲ್ಲಿ ನಿವಾಸಿ ಎಂದು ಗುರುತಿಸಲಾಗಿತ್ತು. ಆತನ ಮನೆಯವರು ಮದ್ಯರಾತ್ರಿ ಬಂದು ಮೃತದೇಹವನ್ನು ಗುರುತಿಸಿ ಅದನ್ನು ತೆಗೆದುಕೊಂಡು ಹೋಗಿದ್ದಾರೆ. ಸ್ಥಳೀಯ ಮಸೀದಿ ಒಂದರಲ್ಲಿ ಮೃತದೇಹವನ್ನು ಇಟ್ಟು ಪ್ರಾರ್ಥನೆ ಮಾಡಿ ಕಳುಹಿಸಿಕೊಡಲಾಗಿದೆ. ವಿಚಾರಣೆ ವೇಳೆ ಮೃತಪಟ್ಟ ಯುವಕ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದರು. ಆದರೆ ಗೃಹ ಸಚಿವರ ಹೇಳಿಕೆಗೆ ಕರಾವಳಿಯಲ್ಲಿ ಮುಸ್ಲಿಂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: Viral Video: ಅಂಗಡಿಯಲ್ಲಿ ನಿಂತಿದ್ದವನಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ; ಏನಿದು ಘಟನೆ?

ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿ ದೀಪಕ್ ಕುಮಾರ್ ಎಂಬುವವರು 19 ಮಂದಿ ಮತ್ತು ಇತರರ ವಿರುದ್ಧ ನೀಡಿದ ದೂರಿನ ಆಧಾರದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 37/2025, ಕಲಂ: 103(2), 115(2), 189(2), 190, 191(1), 191(3), 240 ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಪ್ರಕರಣ ಸಂಬಂಧ 20 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.