ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರೇಷನ್​ ಕಾರ್ಡ್​ದಾರರಿಗೆ ಸಿಹಿ ಸುದ್ದಿ; ಇ-ಕೆವೈಸಿ ಗಡುವು ನವೆಂಬರ್ 30ರವರೆಗೆ ವಿಸ್ತರಣೆ

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಸಿಹಿಸುದ್ದಿಯನ್ನು ನೀಡಿದೆ. ಪಡಿತರ ಚೀಟಿಯ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ನವೆಂಬರ್ 30, 2026 ರವರೆಗೆ ವಿಸ್ತರಿಸಿ ಇಲಾಖೆ ಆದೇಶ ಹೊರಡಿಸಿದೆ.

ರೇಷನ್​ ಕಾರ್ಡ್ ಇ-ಕೆವೈಸಿ ಗಡುವು ನವೆಂಬರ್ 30ರವರೆಗೆ ವಿಸ್ತರಣೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Nov 11, 2026 11:15 AM

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ (Ration Card) ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಸಿಹಿಸುದ್ದಿಯನ್ನು ನೀಡಿದೆ. ಪಡಿತರ ಚೀಟಿಯ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ನವೆಂಬರ್ 30, 2026 ರವರೆಗೆ ವಿಸ್ತರಿಸಿ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ಇ-ಕೆವೈಸಿ ಮಾಡಿಸಲು ನವೆಂಬರ್ 10 ಅಂತಿಮ ದಿನವಾಗಿತ್ತು. ಆದರೆ, ರಾಜ್ಯದಲ್ಲಿ ಇನ್ನೂ ಸುಮಾರು 39 ರಿಂದ 41 ಲಕ್ಷ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುವುದು ಬಾಕಿ ಇದೆ.

ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಗಳಿಂದಾಗಿ ಅನೇಕರಿಗೆ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಇಲಾಖೆಯು ಈ ಅಂತಿಮ ಅವಕಾಶವನ್ನು ನೀಡಿದೆ. ನವೆಂಬರ್ 30ರ ನಂತರ ಯಾವುದೇ ಕಾರಣಕ್ಕೂ ದಿನಾಂಕವನ್ನು ಮತ್ತೆ ವಿಸ್ತರಿಸಲಾಗುವುದಿಲ್ಲ ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ. ನಿಗದಿತ ಗಡುವಿನೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಮುಂದಿನ ತಿಂಗಳಿನಿಂದ ಪಡಿತರ ವಿತರಣೆ ಸ್ಥಗಿತಗೊಳ್ಳುವ ಹಾಗೂ ಪಡಿತರ ಚೀಟಿ ರದ್ದಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಮರು ಇ-ಕೆವೈಸಿ ಮಾಡಿಸಬೇಕಿದ್ದ ಒಟ್ಟು 2,67,64,276 ಪಡಿತರ ಚೀಟಿ ಫಲಾನುಭವಿಗಳ ಪೈಕಿ, ನವೆಂಬರ್ 3 ರವರೆಗೆ 2,26,30,747 ಫಲಾನುಭವಿಗಳು ಯಶಸ್ವಿಯಾಗಿ ಇ-ಕೆವೈಸಿ ಮಾಡಿಸಿದ್ದಾರೆ. ಆದರೆ, ಇನ್ನುಳಿದ 41,33,529 ಫಲಾನುಭವಿಗಳು ಇ-ಕೆವೈಸಿ ಮಾಡಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ, ಬಾಕಿ ಇರುವ ಎಲ್ಲರೂ ತಕ್ಷಣವೇ ಈ ಪ್ರಕ್ರಿಯೆಯನ್ನು ಮುಗಿಸಿಕೊಳ್ಳುವಂತೆ ಸೂಚಿಸಲಾಗಿದೆ.

Ration Card e-KYC: ಪಡಿತರದಾರರಿಗೆ ಗುಡ್‌ನ್ಯೂಸ್‌; ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಲು ವಾರದೊಳಗೆ ಮೊಬೈಲ್‌ ಆ್ಯಪ್‌ ಬಿಡುಗಡೆ

ಇ-ಕೆವೈಸಿ ಮಾಡಿಸುವುದು ಹೇಗೆ?

'ಅನ್ನ ಸೇವೆ' ಮೊಬೈಲ್ ಆ್ಯಪ್ : ಗೂಗಲ್ ಪ್ಲೇ ಸ್ಟೋರ್‌ನಿಂದ 'Anna Seve' ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. ಆಧಾರ್ ಮುಖ ಗುರುತಿಸುವಿಕೆ ಆ್ಯಪ್ ಸಹಾಯದಿಂದ ಫಲಾನುಭವಿಗಳು ಮನೆಯಲ್ಲೇ ಕುಳಿತು ಮೊಬೈಲ್ ಮೂಲಕ ಮುಖ ಚಹರೆ ನೀಡಿ ಇ-ಕೆವೈಸಿ ಪೂರ್ಣಗೊಳಿಸಬಹುದು.

ರೇಷನ್ ಅಂಗಡಿಯಲ್ಲಿ: ನಿಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಅಲ್ಲಿನ 'AHARA' ತಂತ್ರಾಂಶದಲ್ಲಿ ಬಯೋಮೆಟ್ರಿಕ್ (ಬೆರಳಚ್ಚು) ನೀಡುವ ಮೂಲಕ ಸುಲಭವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.