ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kidnap case: ತಂದೆಯ ಎದುರೇ ಮಗಳ ಕಿಡ್ನ್ಯಾಪ್‌; ರಕ್ಷಿಸಲು ಹೋದ ತಂದೆಯನ್ನು 200 ಮೀಟರ್ ಎಳೆದೊಯ್ದ ಕಾರು!

Kidnap case: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ನಡೆದುಕೊಂಡು ತಂದೆ ಜತೆ ಯುವತಿ ನಡೆದುಕೊಂಡು ಹೋಗುತ್ತಿದ್ದಾಗ ಕಿಡ್ನ್ಯಾಪ್‌ ಮಾಡಲಾಗಿದೆ. ಮಗಳನ್ನು ರಕ್ಷಿಸಲು ಹೋದ ತಂದೆಯನ್ನು ಕಾರು ಸುಮಾರು 200 ಮೀಟರ್ ಎಳೆದೊಯ್ದಿದೆ.

ಹಾಸನದಲ್ಲಿ ತಂದೆಯ ಎದುರೇ ಮಗಳ ಕಿಡ್ನ್ಯಾಪ್‌!

Profile Prabhakara R May 14, 2025 2:17 PM

ಹಾಸನ: ತಂದೆಯ ಎದುರೇ ಮಗಳನ್ನು ಅಪಹರಿಸಿದ ಘಟನೆ (Kidnap case) ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮಗಳನ್ನು ಕಾಪಾಡಲು ಹೋಗಿ ತಂದೆ ಚಲಿಸುತ್ತಿದ್ದ ಕಾರಿನ ಡೋರ್​ಗೆ ನೇತಾಡುತ್ತ ಸುಮಾರು 200 ಮೀಟರ್ ದೂರ ಸಾಗಿದ್ದಾರೆ. ಆದರೂ ನಿಲ್ಲಿಸದೇ ದುರುಳರೂ ಮುಂದೇ ಸಾಗಿದ್ದರಿಂದ ಕೆಳಗೆ ಬಿದ್ದು ಯುವತಿಯ ತಂದೆ ಗಾಯಗೊಂಡಿದ್ದಾರೆ.

ಚನ್ನರಾಯಪಟ್ಟಣ ಮೂಲದ ಯುವಕ ಪ್ರಜ್ವಲ್ ಮತ್ತು ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಪರಸ್ಪರ ಪ್ರೀತಿಸಿ, ಎರಡು ತಿಂಗಳ ಹಿಂದೆ ಮದುವೆಯಾಗಿದ್ದರು. ಈ ವಿಚಾರ ತಿಳಿದ ಯುವತಿ ತಂದೆ-ತಾಯಿ ಮರಳಿ ಮನೆಗೆ ಬರುವಂತೆ ಮಗಳ ಮೇಲೆ ಒತ್ತಡ ಹೇರಿದ್ದರು. ಪೋಷಕರ ಒತ್ತಡ ಹಿನ್ನೆಲೆಯಲ್ಲಿ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ ಮರಳಿ ಮನೆಗೆ ಬಂದಿದ್ದಳು.

ಮಗಳು ಮನೆಗೆ ಮರಳುತ್ತಿದ್ದಂತೆ ಆಕೆಯ ಪೋಷಕರು ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತಿ ಪ್ರಜ್ವಲ್​ಗೆ ಯುವತಿ ಹೇಳಿದ್ದು, ತನ್ನನ್ನು ಕರೆದುಕೊಂಡು ಹೋಗುವಂತೆಯೂ ತಿಳಿಸಿದ್ದಳು ಎನ್ನಲಾಗಿದೆ.

ಪತ್ನಿಯ ಇಚ್ಚೆಯಂತೆ ಅರೇಹಳ್ಳಿ ಗ್ರಾಮಕ್ಕೆ ಪ್ರಜ್ವಲ್​ ಬಂದಿದ್ದಾನೆ. ಪತ್ನಿಯನ್ನು ತನ್ನ ಜೊತೆ ಕಳುಹಿಸಿಕೊಡುವಂತೆ ಪ್ರಜ್ವಲ್ ಕೇಳಿದಾಗ, ಯುವತಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳವಾರ ತಂದೆ ಜತೆ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್​ ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪ್ರಜ್ವಲ್​, ಪತ್ನಿ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್​ರನ್ನು ಕರೆದುಕೊಂಡು ಹೋಗಿದ್ದಾರೆ.

ಈ ವೇಳೆ ತಡೆಯಲು ಹೋಗಿ ತಂದೆ ಕಾರಿನ ಡೋರ್​ಗೆ ಜೋತು ಬಿದ್ದಿದ್ದಾರೆ. ಚಾಲಕ ಮಾತ್ರ ಕಾರು ನಿಲ್ಲಿಸಿದೆ ಸುಮಾರು 200 ಮೀಟರ್ ಎಳೆದೊಯ್ದಿದ್ದಾನೆ. ಇದರಿಂದ ತಂದೆ ಬಿದ್ದು ಗಾಯಗೊಂಡಿದ್ದಾರೆ. ಬಳಿಕ ದಂಪತಿ ಚನ್ನರಾಯಪಟ್ಟಣ ಶಹರ ಠಾಣೆ ಪೊಲೀಸರ ಎದುರು ಹಾಜಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನೂ ಓದಿ | Murder Case: ಆಸ್ತಿಗಾಗಿ ನಾಲ್ಕು ಜನರ ಕೊಲೆ ಮಾಡಿದ ಮಗನಿಗೆ ಗಲ್ಲು, ಅಪ್ಪನಿಗೆ ಜೀವಾವಧಿ ಶಿಕ್ಷೆ

ಡಿವೈಡರ್‌ಗೆ ಬಸ್‌ ಡಿಕ್ಕಿ, ದೇವನಹಳ್ಳಿ ಏರ್‌ಪೋರ್ಟ್‌ ಸಿಬ್ಬಂದಿ ಸಾವು

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ವಿಭಜಕಕ್ಕೆ (divider) ಡಿಕ್ಕಿ ಹೊಡೆದು ಉರುಳಿಬಿದ್ದ (Road Accident) ಪರಿಣಾಮ ಓರ್ವ ಸಾವನ್ನಪ್ಪಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru airport) 33 ಮಂದಿ ಸಿಬ್ಬಂದಿಗಳು (KIA employee) ಗಾಯಗೊಂಡಿರುವ ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗೂರು ಸಿಐಎಸ್‌ಎಫ್ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಸಂತೋಷ್ ಯಾದವ್ (35) ಎಂದು ಗುರ್ತಿಸಲಾಗಿದೆ. ಊಟದ ಸಮಯ ಹಿನ್ನೆಲೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೆಐಎಯ ಸುಮಾರು 35 ಮಂದಿ ಸಿಬ್ಬಂದಿಯನ್ನು ಹೊತ್ತ ಖಾಸಗಿ ಬಸ್ ಯಲಹಂಕದ ಕಡಯರಪ್ಪನಹಳ್ಳಿಯ ಪೇಯಿಂಗ್ ಗೆ‌ಸ್ಟ್‌ಹೌಸ್ ಕಡೆಗೆ ತೆರಳುತ್ತಿತ್ತು. ಬೇಗೂರು ಜಂಕ್ಷನ್‌ನಲ್ಲಿ ಎಡ ತಿರುವು ಪಡೆದಾಗ ಅಪಘಾತ ಸಂಭವಿಸಿದೆ. ವಾಹನವನ್ನು ವೇಗವಾಗಿ ಚಲಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಉರುಳಿ ಬಿದ್ದಿದೆ, ಬಸ್ ನ್ನು ನಾಸಿರ್ ಅಹ್ಮದ್ ಎಂಬ ಚಾಲಕ ಚಲಾಯಿಸುತ್ತಿದ್ದ ಎನ್ನಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಈ ನಡುವೆ ತೀವ್ರವಾಗಿ ಗಾಯಗೊಂಡಿದ್ದ ಸಂತೋಷ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನೂ ಓದಿ | Haveri News: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇತರರನ್ನು ಬಿಡುಗಡೆ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.