ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Hassan tragedy: ಹಾಸನ ದುರಂತ: ಮೃತರ ಸಂಖ್ಯೆ 10ಕ್ಕೆ ಏರಿಕೆ

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಶಿವಯ್ಯನ ಕೊಪ್ಪಲು ಗ್ರಾಮದ ವಿದ್ಯಾರ್ಥಿ ಚಂದನ್ (26) ಚಿಕಿತ್ಸೆ ಫಲಿಸದೇ ಶನಿವಾರ ಸಂಜೆ ಸಾವಿಗೀಡಾಗಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆದಂತಾಗಿದೆ.

ಹಾಸನ ದುರಂತ: ಮೃತರ ಸಂಖ್ಯೆ 10ಕ್ಕೆ ಏರಿಕೆ

-

ಹರೀಶ್‌ ಕೇರ ಹರೀಶ್‌ ಕೇರ Sep 14, 2025 7:14 AM

ಹಾಸನ: ಗಣೇಶೋತ್ಸವ ಮೆರವಣಿಗೆ ವೇಳೆ ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಟ್ರಕ್ ನುಗ್ಗಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಶಿವಯ್ಯನ ಕೊಪ್ಪಲು ಗ್ರಾಮದ ವಿದ್ಯಾರ್ಥಿ ಚಂದನ್ (26) ಚಿಕಿತ್ಸೆ ಫಲಿಸದೇ ಶನಿವಾರ ಸಂಜೆ ಸಾವಿಗೀಡಾಗಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾದಂತಾಗಿದೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸದ್ಯ ಇತರ ಗಾಯಾಳುಗಳಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಚಾಲಕನ ನಿರ್ಲಕ್ಷ್ಯವೇ ಕಾರಣ

ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿರುವ ದುರಂತ (Hassan tragedy) ನಿಜಕ್ಕೂ ದುರದೃಷ್ಟಕರ. ಟ್ರಕ್‌ ಚಾಲಕ ಭುವನೇಶ್ ಎಂಬಾತನ ನಿರ್ಲಕ್ಷ್ಯವೇ ಈ ದುರಂತಕ್ಕೆ ಮುಖ್ಯ ಕಾರಣ. ಈಗಾಗಲೇ ಆತನ ವಿರುದ್ಧ ಗೋರೂರ್‌ ಪೊಲೀಸ್‌ ಠಾಣೆಯಲ್ಲಿ FIR ದಾಖಲಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ (Krishna Byregowda) ಹೇಳಿಕೆ ನೀಡಿದರು.

ಅಲ್ಲದೆ, ಜನರಿಂದ ತೀವ್ರ ಥಳಿತಕ್ಕೊಳಪಟ್ಟವನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ವಿರುದ್ಧ ಎಲ್ಲಾ ರೀತಿಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಇದೇ ಸಮಯದಲ್ಲಿ ಟ್ರಕ್‌ ಚಾಲಕ ಓರ್ವ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುತ್ತಾ ಕೆಲವು ವಿಪಕ್ಷದವರು ಈ ಘಟನೆಗೆ ಕೋಮು ಬಣ್ಣ ನೀಡುತ್ತಿರುವುದೂ ಸಹ ಕಂಡುಬಂದಿದೆ. ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವ ಇಂತಹ ದುರ್ವರ್ತನೆಯೂ ಸಹ ಕಾನೂನು ರೀತಿಯ ಅಪರಾಧವಾಗಿದ್ದು, ಅಂತಹವರ ವಿರುದ್ಧವೂ ಸಹ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ತಿಳಿಸಿದರು.