Laxmi Hebbalkar: ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಲಕ್ಷ್ಮೀ ಹೆಬ್ಬಾಳ್ಕರ್
Hasanamba Temple: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಸನಾಂಬೆ ದರ್ಶನ ಉತ್ಸವದಲ್ಲಿ ಸಾಮಾನ್ಯ ಭಕ್ತರಂತೆ ಸರಳತೆಯನ್ನು ಮೆರೆದಿದ್ದಾರೆ. ಅವರು ಸ್ವತಃ ಸಾವಿರ ರೂಪಾಯಿ ಟಿಕೆಟ್ ಖರೀದಿಸಿ, ಸಾಮಾನ್ಯ ಭಕ್ತರೊಟ್ಟಿಗೆ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.

-

ಹಾಸನ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಹಾಸನಾಂಬೆ ದರ್ಶನ ಉತ್ಸವದಲ್ಲಿ (Hasanamba Temple) ಸಾಮಾನ್ಯ ಭಕ್ತರಂತೆ ಭಾಗವಹಿಸಿ ಸರಳತೆ ಮೆರೆದಿದ್ದಾರೆ. ಅವರು ಸ್ವತಃ ಸಾವಿರ ರೂಪಾಯಿ ಟಿಕೆಟ್ ಖರೀದಿಸಿ, ಸಾಮಾನ್ಯ ಭಕ್ತರೊಟ್ಟಿಗೆ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.
ಬೆಂಗಳೂರಿನಿಂದ ಗುರುವಾರ ಸಂಜೆ ಹಾಸನಕ್ಕೆ ಆಗಮಿಸಿದ್ದ ಸಚಿವರಿಗೆ ಜಿಲ್ಲಾಡಳಿತ ನಿಗದಿಪಡಿಸಿದ್ದ ಶಿಷ್ಟಾಚಾರದ ಸಮಯ ಮುಗಿದಿತ್ತು. ಈ ಸಂದರ್ಭದಲ್ಲಿ ‘ರೂಲ್ಸ್ ಬ್ರೇಕ್ ಮಾಡುವುದು ಸರಿಯಲ್ಲ’ ಎಂದು ನಿರ್ಧರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಯಾವುದೇ ವಿಶೇಷ ಸವಲತ್ತು ಪಡೆಯದೆ ದರ್ಶನ ಪಡೆದರು. ಸಚಿವರ ಈ ನಡೆಯು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಸುದ್ದಿಯನ್ನೂ ಓದಿ | Hasanamba Jathra 2025: ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಜಿಲ್ಲಾಧಿಕಾರಿ ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ, ಹಾಸನ ತಹಸೀಲ್ದಾರ್ ಗೀತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಧರಣಿ ಕುಮಾರ್, ಮುಖಂಡರಾದ ಪಲ್ಲವಿ ಸೇರಿದಂತೆ ಹಲವರು ಸಾಲಿನಲ್ಲಿ ಸಚಿವರಿಗೆ ಸಾಥ್ ನೀಡಿದರು.