Hassan Heart attack: ಅಬ್ಬಾ... ಎಂಥಾ ದುರ್ವಿಧಿ! ಊಟ ಮಾಡುತ್ತಿರುವಾಗಲೇ ಹಾರಿಹೋಯ್ತು ಪ್ರಾಣ
ನಿನ್ನೆ ತಡರಾತ್ರಿ 35 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತನನ್ನು ಚೇತನ್ ಎಂದು ಗುರುತಿಸಲಾಗಿದೆ. ಈತ ಹಾಸನದ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ಎನ್ನಲಾಗಿದೆ.ಚೇತನ್ ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ, ಮಗು ಜೊತೆಗೆ ವಾಸವಾಗಿದ್ದರು, ನಿನ್ನೆ ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದ ವೇಳೆ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ.


ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು(heart attack) ದಿನೇ ದಿನೆ ಹೆಚ್ಚಾಗುತ್ತಿದ್ದು, ಆಗಾಗ ಇಂತಹ ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಹಾಸನದಲ್ಲಿ(Hassan Heart attack) ನಡೆದಿದೆ. ನಿನ್ನೆ ತಡರಾತ್ರಿ 35 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತನನ್ನು ಚೇತನ್ ಎಂದು ಗುರುತಿಸಲಾಗಿದೆ. ಈತ ಹಾಸನದ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ಎನ್ನಲಾಗಿದೆ.
ಚೇತನ್ ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ, ಮಗು ಜೊತೆಗೆ ವಾಸವಾಗಿದ್ದರು, ನಿನ್ನೆ ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದ ವೇಳೆ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಈ ಸುದ್ದಿಯನ್ನೂ ಓದಿ: Sunjay Kapur Death: ಪೋಲೋ ಆಡುತ್ತಿದ್ದಾಗಲೇ ಹೃದಯಾಘಾತ- ಕರಿಷ್ಮಾ ಕಪೂರ್ ಮಾಜಿ ಪತಿ ಸಂಜಯ್ ಕಪೂರ್ ನಿಧನ
ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ಸಂಭ್ರಮಾಚರಣೆಯ ವೇಳೆ ಆರ್‌ಸಿಬಿಯ ಕಟ್ಟಾ ಅಭಿಮಾನಿ ಡ್ಯಾನ್ಸ್ ಮಾಡುತ್ತಲೇ, ಕುಸಿದು ಬಿದ್ದು ಹೃದಯಾಘಾತದಿಂದ(Heart attack) ಸಾವನ್ನಪ್ಪಿದ್ದ ಘಟನೆ ವರದಿಯಾಗಿತ್ತು. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ರಾತ್ರಿ ಆರ್ ಸಿ ಬಿ ಗೆದ್ದ ಬಳಿಕ ಸಂಭ್ರಮಾಚರಣೆಯ ವೇಳೆ ಆರ್‌ಸಿಬಿ ಫ್ಯಾ ಅಭಿಮಾನಿಯಾಗಿದ್ದ ಮಂಜುನಾಥ್ ಈರಪ್ಪ ಕಂಬಾರ್ (28) ಹೃದಯಾಘಾತದಿಂದ ಸಾವನಪ್ಪಿದ್ದಾನೆ. ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಆರ್‌ಸಿಬಿ ಗೆಲವು ಸಂಭ್ರಮಾಚರಣೆಯ ವೇಳೆ ಕುಣಿಯುತ್ತಲೇ, ಕುಸಿದು ಬಿದ್ದು ಮಂಜುನಾಥ್ ಸಾವನಪ್ಪಿದ್ದ.
ಮೃತ ಮಂಜುನಾಥ ಕೆ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಹುಚ್ಚು ಅದರಲ್ಲೂ ಐಪಿಎಲ್ ಅಂತ ಬಂದರೆ ಆರ್ ಸಿ ಬಿ ಆತನ ನೆಚ್ಚಿನ ತಂಡವಾಗಿತ್ತು. ಆರ್‌ಸಿಬಿ ಗೆದ್ದ ಕೂಡಲೇ ಗ್ರಾಮದ ಯುವಕರೊಂದಿಗೆ ಮಕ್ಕಳೊಂದಿಗೆ ಕುಣಿದು ಸಂಭ್ರಮಾಚರಣೆ ಮಾಡುತ್ತಿರುವ ವೇಳೆ, ಕುಸಿದು ಬಿದ್ದು ಮಂಜುನಾಥ್ ಸಾವನಪ್ಪಿದ್ದಾನೆ. ಮೃತ ಮಂಜುನಾಥಗೆ ಆರು ತಿಂಗಳ ಹೆಣ್ಣು ಮಗುವಿದೆ.