Puneeth Kerehalli: ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ; ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ
ಬಂಧನದ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಆಕ್ರೋಶ ಹೊರಹಾಕಿದ್ದಾರೆ. ನನಗೆ ಜೀವ ಬೆದರಿಕೆ ಹಾಕಿದವರನ್ನು ಬಂಧಿಸದೆ ನನ್ನನ್ನು ಅರೆಸ್ಟ್ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಆರೋಪ ಮಾಡಿದ್ದಾರೆ.
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿಯಲ್ಲಿ ಪುನೀತ್ ಕೆರೆಹಳ್ಳಿ ಬಂಧನ. -
ಹಾಸನ: ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪದಲ್ಲಿ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಮೌಲ್ವಿಗಳ ಕುರಿತು ನಿಂದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಪುನೀತ್ ಕೆರೆಹಳ್ಳಿ ವಿರುದ್ಧ ಅಬ್ದುಲ್ ರಜಾಕ್ ಎಂಬುವವರು ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದ ಅವರ ನಿವಾಸದ ಮೇಲೆ ಪೊಲೀಸರು ದಾಳಿ ಮಾಡಿ, ಬಂಧಿಸಿ ಕರೆದೊಯ್ದಿದ್ದಾರೆ.
ಬಂಧನದ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿರುವ ಪುನೀತ್ ಕೆರೆಹಳ್ಳಿ, ನನ್ನ ತಮ್ಮನ ಮದುವೆಗೆ ನಾನು ಊರಿಗೆ ಬಂದಿದ್ದಾಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನನಗೆ ಕೊಲೆ ಬೆದರಿಕೆ ಇದೆ ಎಂದು ನಾನೇ ದೂರು ಕೊಟ್ಟಿದ್ದೆ. ಆದರೆ, ನಾನು ಯಾರ ಮೇಲೆ ದೂರು ನೀಡಿದ್ದೇನೋ ಅವರನ್ನು ಬಂಧಿಸದೆ ನನ್ನನ್ನು ಅರೆಸ್ಟ್ ಮಾಡಿದ್ದಾರೆ. ಇಸ್ಲಾಂ ಧರ್ಮಗುರುಗಳಿಗೆ ಬೈದಿದ್ದೇನೆ ಎಂದು, ಅದಕ್ಕೆ ಸಂಬಂಧಪಡದ ವ್ಯಕ್ತಿ ಅಬ್ದುಲ್ ರಜಾಲ್ ಎಂಬಾತ ನೀಡಿದ ದೂರಿನ ಮೇರೆಗೆ ನನ್ನ ಬಂಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಮಕ್ಕಳ ಮೇಲೆ ದೌರ್ಜನ್ಯ: ಬೆಂಗಳೂರು ಡೇ ಕೇರ್‌ನ ಇಬ್ಬರು ಆರೈಕೆದಾರರ ಬಂಧನ
ಪುನೀತ್ ಕೆರೆಹಳ್ಳಿ ಬಂಧಿಸುತ್ತಿದ್ದಂತೆ ಅವರ ತಾಯಿ ಕಣ್ಣೀರಿಟ್ಟಿದ್ದಾರೆ. ಈ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.