Road Accident: ಭೀಕರ ಅಪಘಾತ, ಲಾರಿಗೆ ಕಾರು ಡಿಕ್ಕಿಯಾಗಿ 6 ಜನ ಸಾವು
Road Accident: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಆರು ಮಂದಿ ಹರಿಯಾಣ ಮೂಲದ ಆಡಿ ಎ6 ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಂದರ್ಭಿಕ ಚಿತ್ರ

ಹಾವೇರಿ: ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ (Road Accident) ಸಂಭವಿಸಿದೆ. ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ನಿಯಂತ್ರಣ ಕಳೆದುಕೊಂಡು ವೇಗವಾಗಿ ಬಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಈ ಘಟನೆ ಹಾವೇರಿ (Haveri news) ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೂಟೆಬೆನ್ನೂರು ಗ್ರಾಮದಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಆರು ಮಂದಿ ಹರಿಯಾಣ ಮೂಲದ ಆಡಿ ಎ6 ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಅಪ್ಪಳಿಸಿದೆ. ಕಾರು ಚಾಲಕನ ನಿಯಂತ್ರಣ ಕಳೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತರು ಹರಿಯಾಣ ಮೂಲದವರಾಗಿದ್ದು, ವಿವರಗಳು ತಿಳೀದುಬರಬೇಕಿವೆ.
ಕ್ಯಾಂಟರ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಮೂವರು ಬಾಲಕರು ಸಾವು
ಬಾಗಲಕೋಟೆ: ಬಾಗಲಕೋಟೆಯಲ್ಲಿ ಘೋರವಾದ ಅಪಘಾತ ಸಂಭವಿಸಿದ್ದು ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಬಾಲಕರು ಕ್ಯಾಂಟರ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ, ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬೈಪಾಸ್‌ನಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ಮೂವರೂ ಅಪ್ರಾಪ್ತ ವಯಸ್ಸಿನವರು ಎಂದು ತಿಳಿದು ಬಂದಿದೆ. ಬಾಲಕರು ಗದ್ದನಕೆರೆ ಕ್ರಾಸ್‌ನಿಂದ ಹುಬ್ಬಳ್ಳಿ ಮಾರ್ಗವಾಗಿ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಬಾಲಕರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Road Accident: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ; ಮೂವರ ಸಾವು: ಮಾಜಿ ಶಾಸಕನ ಪುತ್ರನಿಗೆ ಗಂಭೀರ ಗಾಯ