ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Vote Bachao, Desh Bachao: ಚುನಾವಣಾ ಆಯುಕ್ತರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ 'ವೋಟ್ ಬಚಾವೋ, ದೇಶ ಬಚಾವೋ' ಅಭಿಯಾನದಡಿ ಪ್ರತಿಭಟನೆ; ರಾಷ್ಟ್ರಪತಿಗೆ ಮನವಿ

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸು ತ್ತಿದ್ದಾರೆ. ಚುನಾವಣಾ ಆಯೋಗವು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕೇ ಹೊರತು ಆಡಳಿತ ಪಕ್ಷದ ಕೈಗೊಂಬೆಯಾಗಬಾರದು. ಮತದಾನದ ಹಕ್ಕಿನ ರಕ್ಷಣೆ ಪ್ರಜಾಪ್ರಭುತ್ವದ ಉಳಿವಿಗೆ ಅತ್ಯಗತ್ಯ

'ವೋಟ್ ಬಚಾವೋ, ದೇಶ ಬಚಾವೋ' ಅಭಿಯಾನದಡಿ ಪ್ರತಿಭಟನೆ

-

Profile
Ashok Nayak Nov 5, 2026 2:05 PM

ಹಾವೇರಿ: ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆ ಹೆಸರಿನಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿರುವ ಜಿಲ್ಲಾ ಕಾಂಗ್ರೆಸ್ ನಾಯಕರು, 'ವೋಟ್ ಬಚಾವೋ, ದೇಶ ಬಚಾವೋ' (Vote bachao Desh Bachao)ಘೋಷಣೆಯೊಂದಿಗೆ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸ ಬೇಕು ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್(Gyanesh Kumar) ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಯಾಸೀರ್‌ಖಾನ್ ಪಠಾಣ, ಶ್ರೀನಿವಾಸ ಮಾನೆ, ಬಸವರಾಜ ಶಿವಣ್ಣನವರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಹಾಗೂ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಹಕ್ಕುಗಳಿಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: Voter Deletion Claims: ರಾಜ್ಯ ಕಾಂಗ್ರೆಸ್‌ ಪ್ರತಿಭಟನೆಗೆ ಚುನಾವಣಾ ಆಯೋಗ ಸ್ಪಂದನೆ; SIRನಲ್ಲಿ ಸುಳ್ಳು ಆಕ್ಷೇಪಣೆ ಮೂಲಕ ಫಾರಂ-7 ಸಲ್ಲಿಸಿದವರ ವಿರುದ್ಧ ಕ್ರಮಕ್ಕೆ ಆದೇಶ

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದ್ದಾರೆ. ಚುನಾವಣಾ ಆಯೋಗವು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕೇ ಹೊರತು ಆಡಳಿತ ಪಕ್ಷದ ಕೈಗೊಂಬೆಯಾಗಬಾರದು. ಮತದಾನದ ಹಕ್ಕಿನ ರಕ್ಷಣೆ ಪ್ರಜಾಪ್ರಭುತ್ವದ ಉಳಿವಿಗೆ ಅತ್ಯಗತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದರ್ಶನಕುಮಾರ ಲಮಾಣಿ, ಬಸವರಾಜ ಹೆಡಿಗ್ಗೊಂಡ, ಎಂ.ಎಂ. ಹಿರೇಮಠ, ಗುಡ್ಡನಗೌಡ, ಅಂದಾನಿಗೌಡ್ರ, ಹನುಮಂತಪ್ಪ ಬಂಡಿವಡ್ಡರ, ರಮೇಶ ಆನವಟ್ಟಿ ಸೇರಿದಂತೆ ನೂರಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.