ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Haveri News: ಅಪಾಯಕಾರಿ ತಗ್ಗು-ಗುಂಡಿಯಿಂದ ಕೂಡಿರುವ ದೇವಗಿರಿ ರಸ್ತೆಯಿಂದ ಸ್ಥಳೀಯರಿಗೆ ಕಿರಿಕಿರಿ; ವಾಹನ ಸವಾರರೇ ಎಚ್ಚರ

Haveri News: ಹಾವೇರಿಯಿಂದ ಸವಣೂರು ಕಡೆ ಸಾಗುವ ಪ್ರಮುಖ ರಸ್ತೆಯಲ್ಲಿ ದೇವಗಿರಿ ಗ್ರಾಮಕ್ಕೆ ಪ್ರವೇಶಿಸುತ್ತಿದ್ದಂತೆ ರಸ್ತೆಯುದ್ದಕ್ಕೂ ಬೃಹತ್ ಗುಂಡಿಗಳು, ಕೆಸರು ಹಾಗೂ ನೀರು ನಿಂತಿರುವ ದೃಶ್ಯ ಕಂಡುಬರುತ್ತಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅಪಾಯ ಆಹ್ವಾನಿಸುವ ಹಾವೇರಿ ಜಿಲ್ಲೆಯ ದೇವಗಿರಿ ರಸ್ತೆ

ತಗ್ಗು-ಗುಂಡಿಯಿಂದ ಕೂಡಿರುವ ದೇವಗಿರಿ ರಸ್ತೆ -

Profile
Siddalinga Swamy Aug 17, 2026 10:32 PM

ಹಾವೇರಿ, ಆ. 17: ಹಾವೇರಿಯಿಂದ (Haveri News) ಸವಣೂರು ಕಡೆ ಸಾಗುವ ಪ್ರಮುಖ ರಸ್ತೆಯಲ್ಲಿ ದೇವಗಿರಿ ಗ್ರಾಮಕ್ಕೆ ಪ್ರವೇಶಿಸುತ್ತಿದ್ದಂತೆ ರಸ್ತೆಯುದ್ದಕ್ಕೂ ಬೃಹತ್ ಗುಂಡಿಗಳು, ಕೆಸರು ಹಾಗೂ ನೀರು ನಿಂತಿರುವ ದೃಶ್ಯ ಕಂಡುಬರುತ್ತಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಳೆ ಬಂದಾಗ ರಸ್ತೆಯಲ್ಲಿರುವ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುವುದರಿಂದ ಅವುಗಳ ಆಳ ತಿಳಿಯದೆ ದ್ವಿಚಕ್ರ ವಾಹನ ಸವಾರರು ಅಪಾಯಕ್ಕೆ ಸಿಲುಕುವ ಆತಂಕ ಎದುರಾಗಿದೆ. ವಿಶೇಷವಾಗಿ ರಾತ್ರಿ ಈ ರಸ್ತೆ ಇನ್ನಷ್ಟು ಅಪಾಯಕಾರಿಯಾಗಿದ್ದು, ಗುಂಡಿಗಳಿಗೆ ಸಿಲುಕಿ ವಾಹನಗಳು ನಿಯಂತ್ರಣ ತಪ್ಪುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ದೇವಗಿರಿ ಗ್ರಾಮವು ಜಿಲ್ಲೆಯ ದೊಡ್ಡ ಗ್ರಾಮ ಪಂಚಾಯತ್‌ಗಳಲ್ಲಿ ಒಂದೆಂಬ ಹೆಗ್ಗಳಿಕೆ ಹೊಂದಿದ್ದರೂ, ಗ್ರಾಮದಲ್ಲಿನ ಪ್ರಮುಖ ರಸ್ತೆಯ ಈ ದುಸ್ಥಿತಿ ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಬೇಸರ ಮೂಡಿಸಿದೆ. ರಸ್ತೆಯ ಗುಂಡಿಗಳನ್ನು ತಕ್ಷಣ ಮುಚ್ಚಿಸಿ ವಾಹನ ಸವಾರರಿಗೆ ಸುರಕ್ಷಿತ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಸ್ತೆಯ ದುಸ್ಥಿತಿಯ ಕುರಿತು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ತುರ್ತು ದುರಸ್ತಿ ಕಾರ್ಯ ಕೈಗೊಳ್ಳಬೇಕೆಂಬುದು ಸ್ಥಳೀಯ ನಿವಾಸಿಗಳ ಆಗ್ರಹವಾಗಿದೆ.