ಹಾವೇರಿ: ಪರಿಶೀಲನೆಗೆ ಒಳಗಾದ ಮತಗಟ್ಟೆ ಪ್ರಕ್ರಿಯೆ; ತನಿಖೆಗೆ ಒತ್ತಾಯ
ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಅವರ ಪತ್ನಿ ಆಶಾ ಪಾಟೀಲ ಅವರ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶಿಲ್ಪಾ ಬಡಮ್ಮನವರ್ ಮತ ಚಲಾಯಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಈ ಕುರಿತು ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು, ಮತದಾರರ ಗುರುತಿನ ಪರಿಶೀಲನೆ ಹಾಗೂ ಮತದಾನ ಪ್ರಕ್ರಿಯೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
-
ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ(Parishad Election)ಯಲ್ಲಿ ಹಾವೇರಿಯ ಮತಗಟ್ಟೆ ಸಂಖ್ಯೆ 85ರಲ್ಲಿ ನಕಲಿ ಮತದಾನ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಅವರ ಪತ್ನಿ ಆಶಾ ಪಾಟೀಲ ಅವರ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶಿಲ್ಪಾ ಬಡಮ್ಮನವರ್ ಮತ ಚಲಾಯಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಈ ಕುರಿತು ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು, ಮತದಾರರ ಗುರುತಿನ ಪರಿಶೀಲನೆ ಹಾಗೂ ಮತದಾನ ಪ್ರಕ್ರಿಯೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Parishad Election: ಮಂಚೇನಹಳ್ಳಿ ತಾಲೂಕಿನಲ್ಲಿ ಗರಿಷ್ಠ ಶೇ.89.83, ಚೇಳೂರಿನಲ್ಲಿ ಕನಿಷ್ಠ ಶೇ.63.52ರಷ್ಟು ಮತ ಚಲಾವಣೆ
ಈ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಜೀವಕುಮಾರ ನೀರಲಗಿ, ತಮ್ಮ ಪತ್ನಿಯ ಹೆಸರಿನಲ್ಲಿ ಮತದಾನದ ಹಕ್ಕಿನ ದುರುಪಯೋಗವಾಗಿದ್ದರೆ ತನಿಖೆಯಾಗಬೇಕು ಎಂದು ಹೇಳಿದ್ದಾರೆ. ಈ ಕುರಿತು ವಕೀಲರೊಂದಿಗೆ ಚರ್ಚಿಸಿ ದೂರು ಸಲ್ಲಿಸುವುದಾಗಿಯೂ ತಿಳಿಸಿದ್ದಾರೆ.
ಆದರೆ, ಆರೋಪದ ಸತ್ಯಾಸತ್ಯತೆ ಇನ್ನೂ ಅಧಿಕೃತ ತನಿಖೆಯಿಂದ ದೃಢಪಡಬೇಕಿದೆ. ಹೀಗಾಗಿ ಸಂಬಂಧಪಟ್ಟ ಚುನಾವಣಾಧಿಕಾರಿಗಳು ಮತಗಟ್ಟೆಯ ದಾಖಲೆಗಳು ಹಾಗೂ ಲಭ್ಯವಿರುವ ದೃಶ್ಯಾವಳಿಗಳನ್ನು ಪರಿಶೀಲಿಸಿ, ನಿಜಾಂಶವನ್ನು ಬಹಿರಂಗಪಡಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಮತದಾನದ ಪಾವಿತ್ರ್ಯ ಕಾಪಾಡುವುದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಅತ್ಯಂತ ಮುಖ್ಯವಾ ಗಿದ್ದು, ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.