Karnataka SSLC Result: 623 ಅಂಕ ಗಳಿಸಿ ಹಾವೇರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ನಿವೇದಿತಾ
Haveri News: ಎಸ್‌ಎಸ್‌ಎಲ್‌ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಹಾವೇರಿ ಜಿಲ್ಲೆಗೆ ವಿದ್ಯಾರ್ಥಿನಿ ನಿವೇದಿತಾ ಅಜ್ಜಮ್ಮನವರ 625ಕ್ಕೆ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಸ್ಪಂದನ ಪ್ರೌಢಶಾಲೆಯ ವಿದ್ಯಾರ್ಥಿನಿ ನಿವೇದಿತಾ ಪರಶುರಾಮ ಅಜ್ಜಮ್ಮನವರ 625ರಲ್ಲಿ 623 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
623 ಅಂಕ ಗಳಿಸಿ ಹಾವೇರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ನಿವೇದಿತಾ. -
ಹಾವೇರಿ, ಏ.23: ಎಸ್‌ಎಸ್‌ಎಲ್‌ಸಿ ಫಲಿತಾಂಶ (Karnataka SSLC Result) ಗುರುವಾರ ಪ್ರಕಟವಾಗಿದ್ದು, ಹಾವೇರಿ ಜಿಲ್ಲೆಗೆ ವಿದ್ಯಾರ್ಥಿನಿ ನಿವೇದಿತಾ ಅಜ್ಜಮ್ಮನವರ 625ಕ್ಕೆ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಸ್ಪಂದನ ಪ್ರೌಢಶಾಲೆಯ ವಿದ್ಯಾರ್ಥಿನಿ ನಿವೇದಿತಾ ಪರಶುರಾಮ ಅಜ್ಜಮ್ಮನವರ 625ರಲ್ಲಿ 623 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಕೃಷಿಕ ಕುಟುಂಬದ ಹಿನ್ನೆಲೆಯ ನಿವೇದಿತಾ ಅವರು ಐದು ವಿಷಯಗಳಲ್ಲಿ ಶೇಕಡಾ 100 ಅಂಕಗಳನ್ನು ಗಳಿಸಿದ್ದಾರೆ. ಸೈನ್ಸ್ ವಿಷಯದಲ್ಲಿ ಮಾತ್ರ ಎರಡು ಅಂಕಗಳ ಕೊರತೆಯಿಂದ ಪೂರ್ಣ ಅಂಕ ತಪ್ಪಿದೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ, ಮಾಜಿ ಶಾಸಕ ಸುರೇಶ ಗೌಡ ಪಾಟೀಲ, ವಿರೂಪಾಕ್ಷಪ್ಪ ಬಳ್ಳಾರಿ ಸೇರಿದಂತೆ ಹಲವಾರು ಗಣ್ಯರು, ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ವೈ.ಎಚ್. ಕುಡುಪಲಿ ಸೇರಿದಂತೆ ಪದಾಧಿಕಾರಿಗಳು ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ. ಗ್ರಾಮ ಹಾಗೂ ತಾಲೂಕು ಹಾಗೂ ಜಿಲ್ಲೆಗೆ ಕೀರ್ತಿ ತಂದ ನಿವೇದಿತಾ ಅವರಿಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.