Haveri News: ಹಾವೇರಿಯಲ್ಲಿ ನಿಶ್ಚಿತಾರ್ಥದ ಹಿಂದಿನ ದಿನ ಯುವತಿ ನಾಪತ್ತೆ; ಇಬ್ರಾಹಿಂ ವಿರುದ್ಧ ಲವ್ ಜಿಹಾದ್ ಆರೋಪ
Haveri love jihad case: ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ಯುವತಿ ನಾಪತ್ತೆಯಾಗಿದ್ದಾಳೆ. ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ಕಾಣೆಯಾಗಿದ್ದರಿಂದ ಪೋಷಕರು ಕಂಗಾಲಾಗಿದ್ದಾರೆ. ಆದರೆ, ಯವತಿಯು ಮುಸ್ಲಿಂ ಯುವಕನ ಜತೆ ಪರಾರಿಯಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇದು ಲವ್ ಜಿಹಾದ್ ಎಂದು ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಇಬ್ರಾಹಿಂ ಮತ್ತು ನಾಪತ್ತೆಯಾದ ಯುವತಿ ಶಂಕರಮ್. -
ಹಾವೇರಿ: ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ಮನೆಯಿಂದ ಕಾಣೆಯಾಗಿರುವ ಪ್ರಕರಣ ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ (Haveri) ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ಶಂಕರಮ್ಮ (24) ಕೆರಿಮೆತ್ತಿಹಳ್ಳಿ ಎಂಬ ಯುವತಿಯ ನಿಶ್ಚಿತಾರ್ಥ ಇಂದು ನಿಶ್ಚಯವಾಗಿತ್ತು. ಆದರೆ, ನರೇಗಲ್ ಗ್ರಾಮದ ಇಬ್ರಾಹಿಂ ನೆಗಳೂರು ಎಂಬಾತ ನಮ್ಮ ಮಗಳನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.
ಬಿಕಾಂ ಮುಗಿಸಿದ ಬಳಿಕ ಶಂಕರಮ್ಮ ಅಕ್ಕಿಆಲೂರಿಗೆ ಕೆಲಸಕ್ಕೆ ಹೋಗುತ್ತಿದ್ದಳು. ಈ ವೇಳೆ ಇಬ್ರಾಹಿಂನ ಪರಿಚಯವಾಗಿದೆ ಎಂದು ಹೇಳಲಾಗುತ್ತಿದೆ. ಮೇ 11ರಂದು ಶಂಕರಮ್ಮಾಳ ಮದುವೆ ನಿಗದಿ ಮಾಡಲಾಗಿತ್ತು. ಇಂದು ನಿಶ್ಚಿತಾರ್ಥ ಫಿಕ್ಸ್ ಮಾಡಲಾಗುತ್ತಿತ್ತು. ನೆನ್ನೆ ರಾತ್ರಿ ಶಂಕರಮ್ಮಳನ್ನು ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಪರಿಚಯವನ್ನೇ ತನ್ನ ಲಾಭಕ್ಕೆ ಇಬ್ರಾಹಿಂ ಬಳಸಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಇಬ್ರಾಹಿಂ ಬಂಧನಕ್ಕೆ ಆಗ್ರಹ
ಇದೀಗ ಶಂಕರಮ್ಮ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಮ್ಮ ಮಗಳನ್ನು ಹುಡುಕಿಕೊಡಿ ಎಂದು ಮನವಿ ಮಾಡಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಇದು ವ್ಯವಸ್ಥಿತವಾಗಿ ನಡೆಯುತ್ತಿರುವ ಜಾಲ ಎಂದು ಆರೋಪಿಸಿರುವ ಸಂಘಟನೆಗಳು, ಯುವತಿಯನ್ನು ಕೂಡಲೇ ಪತ್ತೆಹಚ್ಚಿ ಕುಟುಂಬಕ್ಕೆ ಒಪ್ಪಿಸಬೇಕೆಂದು ಒತ್ತಾಯಿಸಿವೆ.
ಬೆಂಗಳೂರು, ಹುಬ್ಬಳ್ಳಿ, ಕೊಪ್ಪಳ ಬಳಿಕ ಇದೀಗ ಹಾವೇರಿಯಲ್ಲೂ ಇಂತಹ ಪ್ರಕರಣ ಮುನ್ನೆಲೆಗೆ ಬಂದಿರುವುದು ಜಿಲ್ಲೆಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ
ಮಡಿಕೇರಿ: ತಲೆಗೆ ಗುಂಡು ಹಾರಿಸಿಕೊಂಡು ಸರ್ಕಾರಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಎ.ರೋಹಿಣಿ (51) ಆತ್ಮಹತ್ಯೆಗೆ ಶರಣಾದ ಮಹಿಳೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Girl Death: ಬಾಲಕಿಗೆ ಮೃತ್ಯುವಾದ ಜೋಕಾಲಿ, ಆಟವಾಡುವ ವೇಳೆ ಕುಣಿಕೆ ಬಿದ್ದು ಸಾವು
ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಮುಂಜಾನೆ 5 ಗಂಟೆ ವೇಳೆಗೆ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಅವರು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಡಗು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.