ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಶಿಗ್ಗಾಂವಿಯಲ್ಲಿ ಭೀಕರ ಅಪಘಾತ; ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನವದಂಪತಿ ದುರ್ಮರಣ

Haveri Accident: ಶಿಗ್ಗಾಂವಿ ಸಮೀಪದ ಅಂಬುಜಾ ಪ್ಯಾಕ್ಟರಿ ಬಳಿ ಭೀಕರ ಅಪಘಾತ ನಡೆದಿದೆ. ದೇವರ ದರ್ಶನ ಮುಗಿಸಿಕೊಂಡು ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಹೋಗುವಾಗ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಮುಂಜಾನೆ ಹೋಗುತ್ತಿದ್ದಾಗ ದುರಂತ ಸಂಭವಿಸಿದ್ದು, 15 ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಮೃತಪಟ್ಟಿದ್ದಾರೆ.

ಲಾರಿಗೆ ಕಾರು ಡಿಕ್ಕಿಯಾಗಿ 15 ಹಿಂದಷ್ಟೇ ಮದುವೆಯಾಗಿದ್ದ ದಂಪತಿ ಸಾವು

ಶಿಗ್ಗಾಂವಿ ಸಮೀಪ ಕಾರು ಅಪಘಾತದಲ್ಲಿ ಮೃತಪಟ್ಟ ಕಾರ್ತಿಕ್-ಐಶ್ವರ್ಯ ದಂಪತಿ. -

Prabhakara R
Prabhakara R Mar 1, 2026 3:06 PM

ಹಾವೇರಿ: ರಸ್ತೆಯಲ್ಲಿ ನಿಂತಿದ್ದ ಲಾರಿಗೆ ವ್ಯಾಗನರ್‌ ಕಾರು ಡಿಕ್ಕಿಯಾಗಿ ನವ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ (Haveri Accident) ಶಿಗ್ಗಾಂವಿ ಸಮೀಪದ ಅಂಬುಜಾ ಪ್ಯಾಕ್ಟರಿ ಬಳಿ ನಡೆದಿದೆ. ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್‌ ಹೂಗಾರ (34), ಐಶ್ವರ್ಯ (30) ಮೃತ ದಂಪತಿ. ದೇವರ ದರ್ಶನ ಮುಗಿಸಿಕೊಂಡು ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಮುಂಜಾನೆ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ.

ಹಾವೇರಿಯ ಕೀರ್ತಿ ಹೂಗಾರ ಮತ್ತು ಶಿಗ್ಗಾಂವಿಯ ಐಶ್ವರ್ಯಗೆ ಕಳೆದ 15 ದಿನಗಳ ಹಿಂದೆ ವಿವಾಹವಾಗಿತ್ತು. ದೇವರ ದರ್ಶನ ಪಡೆದುಕೊಂಡು ಹಾವೇರಿಗೆ ಮರಳುವ ಸಮಯದಲ್ಲಿ ಈ ದುರ್ಘಟನೆ ಸಂಭವಿದೆ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೆ ತೀವ್ರತೆಗೆ ಕಾರು ಸಂಪೂರ್ಣ ಜಖಂ ಆಗಿದೆ. ಅಗ್ನಿ ಶಾಮಕದವರು ಹಾಗೂ ಸ್ಥಳೀಯರು ಮೃತ ದೇಹಗಳನ್ನು ಹೊರತಗೆದಿದ್ದಾರೆ. ಸ್ಥಳಕ್ಕೆ ತಡಸ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ಕೊಟ್ಟು, ಪರಿಶೀಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಆನೇಕಲ್‌ನಲ್ಲಿ ಪತ್ನಿಯನ್ನು ಕೊಂದು ಪತಿಯೂ ಆತ್ಮಹತ್ಯೆ

ಆನೇಕಲ್ ​​​​(ಬೆಂಗಳೂರು): ಪತ್ನಿಯನ್ನು ಕೊಲೆಗೈದು ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವುದು ಆನೇಕಲ್‌ನ ಸೂರ್ಯನಗರ ಠಾಣೆ ವ್ಯಾಪ್ತಿಯ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.ಒಡಿಶಾದ ದೀಪಾಂತ ಸಬರ (31) ಮತ್ತು ಪತ್ನಿ ಮಂಜುಳಾ ಸಬರ (27) ಮೃತರು.

20 ದಿನಗಳ ಹಿಂದಷ್ಟೇ ದಂಪತಿ ಬಾಡಿಗೆ ಮನೆಗೆ ಬಂದಿದ್ದರು. ಬೊಮ್ಮಸಂದ್ರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿಯ ನಡುವೆ ಜಗಳ ನಡೆದಿದ್ದು, ಕೋಪದಲ್ಲಿ ಪತ್ನಿಯನ್ನು ಪತಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಮನೆ ಮಾಲೀಕ ಶಿವಕುಮಾರ್ ಇಪ್ಪತ್ತು ದಿನಗಳ ಹಿಂದೆ ದಂಪತಿಗೆ ಮನೆ ಕೊಟ್ಟಿದ್ದರು. ಗುರುವಾರ ರಾತ್ರಿ ಮನೆ ಮಾಲೀಕರ ತಾಯಿ ಚೌಡಮ್ಮ ಮನೆ ಬಳಿ ನೋಡಿದಾಗ ಮಂಚದ ಮೇಲೆ ಮಹಿಳೆಯ ಶವ ಕಾಣಿಸಿದೆ. ಕೂಡಲೇ ಸೂರ್ಯ ನಗರ ಪೊಲೀಸರಿಗೆ ಶಿವಕುಮಾ‌ರ್ ಮಾಹಿತಿ ನೀಡಿದ್ದಾರೆ. ಪತ್ನಿಯ ಶವದ ಮುಂದೆ ಪತಿ ಅಳುತ್ತಲೇ ಸೆಲ್ಫಿ ವಿಡಿಯೋ ಮಾಡಿ ಆ ನಂತರ ಆತ್ಮಹತ್ಯೆ ಮಾಡಿಕೊಂಡಿರುವುದು ಪೊಲೀಸರಿಗೆ ಸಿಕ್ಕ ಮೊಬೈಲ್​ನಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ಇಂಗು ಗುಂಡಿ ಸ್ವಚ್ಛತೆ ವೇಳೆ ಉಸಿರುಗಟ್ಟಿ ಮೂವರ ಸಾವು

ಪತಿ ಒಡಿಶಾ ಭಾಷೆಯಲ್ಲಿ ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಎರಡು ದಿನದ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತದೇಹಗಳು ಕೊಳೆಯುವ ಸ್ಥಿತಿಗೆ ಬಂದಿದ್ದವು. ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗಿದೆ.