ಹಾವೇರಿಯ ಜ್ಯುವೆಲ್ಲರಿ ಶಾಪ್‌ನಲ್ಲಿ 70 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳ್ಳತನ; ಲಾಕರ್ ಸಮೇತ ಕಳ್ಳರು ಎಸ್ಕೇಪ್!
Haveri Jewellery shop theft: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿ ಕಳ್ಳತನ ನಡೆದಿದೆ. ಅಣ್ಣಪ್ಪ ಭಜಂತ್ರಿ ಅವರ ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ 70 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳ್ಳರು ದೋಚಿದ್ದಾರೆ.
ಕಳ್ಳತನವಾಗಿರುವ ಹಾನಗಲ್ ತಾಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದ ಚಿನ್ನದಂಗಡಿ. -
ಹಾವೇರಿ: ರಾಜ್ಯದಲ್ಲಿ ಮತ್ತೊಂದು ಚಿನ್ನದಂಗಡಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿಯ ಚಿನ್ನದ ಅಂಗಡಿಯೊಂದಕ್ಕೆ ನುಗ್ಗಿದ ಖದೀಮರು, ಬರೋಬ್ಬರಿ 70 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿ (Haveri Jewellery shop theft) ಪರಾರಿಯಾಗಿದ್ದಾರೆ. ದರೋಡೆಯ ದೃಶ್ಯಗಳು ಅಂಗಡಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿ ಕಳ್ಳತನ ನಡೆದಿದೆ. ಅಣ್ಣಪ್ಪ ಭಜಂತ್ರಿ ಅವರ ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ನಡೆದಿದೆ.
ಅಂಗಡಿಯ ಬೀಗ ಮುರಿದು ಒಳನುಗ್ಗಿದ ದರೋಡೆಕೋರರು ಅಂದಾಜು 300 ಗ್ರಾಂ ಚಿನ್ನ ಹಾಗೂ 25 ಕೆಜಿ ತೂಕದ ಬೆಳ್ಳಿಯ ಆಭರಣಗಳನ್ನು ದೋಚಿದ್ದಾರೆ. ಅತ್ಯಂತ ಯೋಜಿತವಾಗಿ ಸ್ಕೆಚ್ ಹಾಕಿದ್ದ ಕಳ್ಳರು, ಆಭರಣಗಳನ್ನು ಹುಡುಕುವ ಗೋಜಿಗೆ ಹೋಗದೆ, ಒಳಗೆ ಇಟ್ಟಿದ್ದ ಇಡೀ ಲಾಕರ್ ಸಮೇತ ಎಸ್ಕೇಪ್ ಆಗಿದ್ದಾರೆ.
ಸಿಸಿಟಿವಿಯಲ್ಲಿ ಸೆರೆಯಾಗಬಹುದು ಎಂದು ಮುನ್ನೆಚ್ಚರಿಕೆ ವಹಿಸಿದ್ದ ಕಳ್ಳರು, ತಮ್ಮ ಗುರುತು ಸಿಗಬಾರದೆಂದು ಮುಖಕ್ಕೆ ಮಾಸ್ಕ್ ಹಾಗೂ ಕೈಗೆ ಗ್ಲೌಸ್ ಧರಿಸಿ ಅಂಗಡಿಯೊಳಗೆ ನುಗ್ಗಿದ್ದರು. ಕಳ್ಳತನದ ದೃಶ್ಯಗಳು ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ.
ಪ್ರೇಮಿಯನ್ನು ಕೊಂದು ಡ್ರಮ್‌ನಲ್ಲಿ ತುಂಬಿ ಚರಂಡಿಗೆ ಎಸೆದ ದಂಪತಿ; ಕೊಲೆ ರಹಸ್ಯ ಬೆಳಕಿಗೆ ಬಂದಿದ್ದೇ ರೋಚಕ
ಹಾವೇರಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (SP) ಲಕ್ಷ್ಮಣ ಶಿರಕೋಳ ಅವರು ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಕಳ್ಳರ ಪತ್ತೆಗಾಗಿ ಜಾಲ ಬೀಸಿದ್ದಾರೆ.