ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬತ್ತಿಕೊಪ್ಪದಲ್ಲಿ ಅಮಾನವೀಯ ಕೃತ್ಯ; ಮೂವರು ಯುವಕರನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ!

Haveri News: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿ ವಿವಾಹವಾದ ಜೋಡಿಯ ವಿವಾಹ ನೋಂದಣಿ ಪ್ರಕ್ರಿಯೆಗೆ ಮುಂದಾಗಿದ್ದ ಸಂದರ್ಭದಲ್ಲಿ ಮೂವರು ಯುವಕರನ್ನು ಅರೆಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಜರುಗಿದೆ.

ಬತ್ತಿಕೊಪ್ಪದಲ್ಲಿ ಯುವಕರನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ!

-

Profile
Siddalinga Swamy Nov 3, 2026 3:55 PM

ರಟ್ಟಿಹಳ್ಳಿ: ಪ್ರೀತಿಸಿ ವಿವಾಹವಾದ ಜೋಡಿಯ ವಿವಾಹ ನೋಂದಣಿ ಪ್ರಕ್ರಿಯೆಗೆ ಮುಂದಾಗಿದ್ದ ಸಂದರ್ಭದಲ್ಲಿ ಮೂವರು ಯುವಕರನ್ನು ಅರೆಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ (Haveri News) ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಜರುಗಿದೆ. ಕಳೆದ ಅ.30ರಂದು ನಡೆದಿದ್ದ ಈ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬತ್ತಿಕೊಪ್ಪ ಗ್ರಾಮದ ಯುವತಿ ಹಾಗೂ ರಟ್ಟಿಹಳ್ಳಿ ಪಟ್ಟಣದ ಯುವಕ ಪ್ರಮೋದ ಮಾಲತೇಶಪ್ಪ ಪುರದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಬ್ಬರೂ ದೇವಸ್ಥಾನದಲ್ಲಿ ವಿವಾಹವಾಗಿದ್ದು, ನಂತರ ವಿವಾಹ ನೋಂದಣಿ ಮಾಡಿಸಿಕೊಳ್ಳುವ ಉದ್ದೇಶದಿಂದ ಮುಂದಾಗಿದ್ದರು. ಈ ನಡುವೆ ಯುವತಿ ತನ್ನನ್ನು ಕರೆದುಕೊಂಡು ಹೋಗುವಂತೆ ಪ್ರಮೋದ ಅವರಿಗೆ ದೂರವಾಣಿ ಮೂಲಕ ತಿಳಿಸಿದ್ದಾಳೆ. ಅದರಂತೆ ಪ್ರಮೋದ ತಮ್ಮ ಸ್ನೇಹಿತರೊಂದಿಗೆ ಬತ್ತಿಕೊಪ್ಪ ಗ್ರಾಮಕ್ಕೆ ತೆರಳಿದ ಸಂದರ್ಭದಲ್ಲಿ ಕೆಲವರು ಅವರನ್ನು ತಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಮೂವರು ಯುವಕರನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಪತ್ನಿಗೆ ಚಾಕುವಿನಿಂದ ಇರಿದು, ಇಟ್ಟಿಗೆಯಿಂದ ತಲೆ ಜಜ್ಜಿ ಕೊನೆಗೆ ಆತ್ಮಹತ್ಯೆಗೆ ಶರಣಾದ ಪಾಪಿ ಪತಿ; ಭೀಕರ ಕೃತ್ಯಕ್ಕೆ ಕಾರಣವೇನು?

ಘಟನೆಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಗೃಹರಕ್ಷಕ ಸಿಬ್ಬಂದಿಯೊಬ್ಬರು ಯುವಕರ ಮೇಲೆ ಹಲ್ಲೆ ನಡೆಯುತ್ತಿದ್ದರೂ ಅದನ್ನು ತಡೆಯಲು ಮುಂದಾಗದೆ ಮೂಕಪ್ರೇಕ್ಷಕರಂತೆ ನಿಂತಿದ್ದರು ಎಂಬ ಆರೋಪ ಕೇಳಿಬಂದಿದೆ. ‌ ಘಟನೆ ಕುರಿತು ಸಂತ್ರಸ್ತರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.