ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ಆರೆಂಜ್‌ ಅಲರ್ಟ್;‌ ಇಂದು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

ಆರೆಂಜ್‌ ಅಲರ್ಟ್;‌ ಇಂದು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ!

Profile Prabhakara R Jun 25, 2025 6:00 AM

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್‌ 25ರಂದು ಭಾರಿ ಮಳೆಯಾಗುವ (Karnataka Weather) ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ನೀಡಿದ್ದು, ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ (ಕೆಆರ್‌ಎಸ್‌) ಹೆಚ್ಚಿನ ನೀರು ಬರುತ್ತಿದ್ದು, ಜಲಾಶಯದಿಂದ ಸುಮಾರು 15000 ರಿಂದ 30,000 ಕ್ಯುಸೆಕ್‌ಗೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಆದ್ದರಿಂದ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡು ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

ಜೂನ್‌ 25ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಚಿಕ್ಕ ಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜೂನ್‌ 26ರಂದು ಕೂಡ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜೂನ್‌ 27ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಗದಗ, ಬಾಗಲಕೋಟೆ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬಳ್ಳಾರಿ, ಚಿತ್ರದುರ್ಗ ಸೇರಿ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜೂನ್‌ 28ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ಹಾಸನ, ಕೋಲಾರ, ಕೊಡಗು ಸೇರಿ ಇತರೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸುದ್ದಿಯನ್ನೂ ಓದಿ | Health Tips: ಪ್ರತಿದಿನ ತೆಂಗಿನ ನೀರು ಸೇವಿಸಿದರೆ ಕೊಬ್ಬು ಕರಗಿ ತೂಕ ಇಳಿಯುತ್ತಾ?

ಜೂನ್‌ 29 ಮತ್ತು 30ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.