ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ರಾಜ್ಯದಲ್ಲಿ ಮುಂದಿನ 4 ದಿನ ಜೋರು ಮಳೆ ನಿರೀಕ್ಷೆ; ಯೆಲ್ಲೋ ಅಲರ್ಟ್‌ ಘೋಷಣೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿ ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂದಿನ 4 ದಿನ ಜೋರು ಮಳೆ ನಿರೀಕ್ಷೆ

Profile Prabhakara R Jun 30, 2025 9:00 PM

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ (Karnataka Rains) ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಜುಲೈ 1ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿ ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.

ಜುಲೈ 2ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 3ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಗದಗ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಕೊಡಗು, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 4ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಗದಗ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಕೊಡಗು, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸುದ್ದಿಯನ್ನೂ ಓದಿ | Health Tips: ದೇಹದ ತೂಕ ಇಳಿಸಲು ಚಿಂತೆ ಬೇಡ; ಈ ಐದು ಪಾನೀಯ ನಿತ್ಯ ಸೇವಿಸಿದರೆ ಸಾಕು

ಜುಲೈ 5 ಮತ್ತು 6ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಬಾಗಲಕೋಟೆ, ಕೊಪ್ಪಳ, ಕಲಬುರ್ಗಿ, ಗದಗ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಕೊಡಗು, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.