ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ಯೆಲ್ಲೋ ಅಲರ್ಟ್;‌ ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ ನಿರೀಕ್ಷೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ ಸಾಧ್ಯತೆ ಇದೆ. ಕರಾವಳಿಯಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಯೆಲ್ಲೋ ಅಲರ್ಟ್;‌ ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ ನಿರೀಕ್ಷೆ

Profile Prabhakara R Jun 17, 2025 8:30 PM

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್‌ 18ರಂದು ಭಾರಿ ಮಳೆಯಾಗುವ (Karnataka Rains) ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಕರಾವಳಿಯಲ್ಲಿ ಗಂಟೆಗೆ 40 - 50 ಕಿ.ಮೀ ನಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ (ಗಂಟೆಗೆ 40-50 ಕಿ.ಮೀ ವೇಗ) ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಜೂನ್‌ 18ರಂದು ಕರಾವಳಿ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಹಗುರ ಮಳೆಯಾಗಲಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಮಂಡ್ಯ ಚಾಮರಾಜನಗರ, ದಾವಣಗೆರೆ, ಹಾಸನ ತುಮಕೂರು, ಬಳ್ಳಾರಿ, ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಜೂನ್‌ 19ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ, ಗದಗ ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಮಂಡ್ಯ ಚಾಮರಾಜನಗರ, ದಾವಣಗೆರೆ, ಹಾಸನ ತುಮಕೂರು, ಬಳ್ಳಾರಿ, ಶಿವಮೊಗ್ಗ, ವಿಜಯನಗರ, ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.



ಜೂನ್‌ 20ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಮಂಡ್ಯ ಚಾಮರಾಜನಗರ, ದಾವಣಗೆರೆ, ಹಾಸನ ತುಮಕೂರು, ಬಳ್ಳಾರಿ, ವಿಜಯನಗರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 21ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ, ಗದಗ ಕಲಬುರಗಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಮಂಡ್ಯ ಚಾಮರಾಜನಗರ, ದಾವಣಗೆರೆ, ಹಾಸನ ತುಮಕೂರು, ಬಳ್ಳಾರಿ, ವಿಜಯನಗರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ಬಿಯರ್‌ ಕುಡಿದರೆ ಹೊಟ್ಟೆ ಬರೋದು ನಿಜನಾ? ಆರೋಗ್ಯಕ್ಕೆ ಇದೆಷ್ಟು ಹಾನಿಕಾರಕ?

ಜೂನ್‌ 22 ಮತ್ತು 23ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ, ಗದಗ ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಮಂಡ್ಯ ಚಾಮರಾಜನಗರ, ದಾವಣಗೆರೆ, ಹಾಸನ ತುಮಕೂರು, ಬಳ್ಳಾರಿ, ವಿಜಯನಗರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.