Karnataka Weather: ಮುಂದಿನ 2 ದಿನ ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ; ರೆಡ್ ಅಲರ್ಟ್ ಘೋಷಣೆ
Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 21°C ಇರುವ ಸಾಧ್ಯತೆ ಇದೆ.


ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆಯು ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಿಸಿದೆ. ಇನ್ನು ಮೇ 26ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 21°C ಇರುವ ಸಾಧ್ಯತೆ ಇದೆ.
ಮೇ 27ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು #KSNDMC #ಮುಂಗಾರುಮಳೆ#ಸುರಕ್ಷಿತವಾಗಿರಿ #ಎಚ್ಚರಿಕೆವಹಿಸಿ pic.twitter.com/v0iMtR97bR
— Karnataka State Natural Disaster Monitoring Centre (@KarnatakaSNDMC) May 25, 2025
ಮೇ 28ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್, ಹಾವೇರಿ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಗದಗ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Karnataka Rains: ಶಿರಾಡಿ ಘಾಟ್‌ನಲ್ಲಿ ಭೂ ಕುಸಿತ, ಸಂಚಾರಕ್ಕೆ ಅಡಚಣೆ; ಸಕಲೇಶಪುರದಲ್ಲಿ ಹೋಟೆಲ್ ಗೋಡೆ ಬಿದ್ದು ನಾಲ್ವರಿಗೆ ಗಾಯ
ಮೇ 29 ಮತ್ತು 30ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್, ಹಾವೇರಿ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಗದಗ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು. ರಾಮನಗರ, ತುಮಕೂರು ಮತ್ತು ವಿಜಯನಗರ ಭಾರಿ ಮಳೆಯಾಗುವ ಸಾಧ್ಯತೆ ಇದೆ.