ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ಯೆಲ್ಲೋ ಅಲರ್ಟ್‌ ಮುಂದುವರಿಕೆ; ನಾಳೆಯೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

ನಾಳೆಯೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ

Profile Prabhakara R Jun 27, 2025 7:45 PM

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು ಸೇರಿ ವಿವಿಧೆಡೆ ಗುರುವಾರ ಮಳೆಯಾಗಿದ್ದು, ಅದೇ ರೀತಿ ಜೂನ್‌ 28ರಂದು ಕೂಡ ವರುಣ (Karnataka Rains) ಆರ್ಭಟಿಸುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

ಜೂನ್‌ 28ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ವಿಜಯನಗರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜೂನ್‌ 29ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ, ಬೀದರ್, ಹಾವೇರಿ, ಗದಗ, ಕಲಬುರಗಿ ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮೈಸೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.



ಜೂನ್‌ 30ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ, ಬೀದರ್, ಹಾವೇರಿ, ಗದಗ, ಕಲಬುರಗಿ, ವಿಜಯಪುರ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮೈಸೂರು ಸೇರಿ ಇತರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 1ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ವಿಜಯನಗರ ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸುದ್ದಿಯನ್ನೂ ಓದಿ | Health Tips: ಹರ್ನಿಯ ತೊಂದರೆ: ಏನು ಮಾಡಬೇಕು ಬಂದರೆ?

ಇನ್ನು ಜುಲೈ 2 ಮತ್ತು 3ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದ‌ರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಮಲೆನಾಡು ಜಿಲ್ಲೆಗಳು, ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ ಸೇರಿ ಇತರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.