ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ಆರೆಂಜ್‌ ಅಲರ್ಟ್; ಮುಂದಿನ 3 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಅಬ್ಬರಿಸಲಿದೆ ಮಳೆ! ‌

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿ ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಹೆಚ್ಚಿದೆ.

ಮುಂದಿನ 3 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಅಬ್ಬರಿಸಲಿದೆ ಮಳೆ! ‌

Profile Prabhakara R May 27, 2025 6:34 PM

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಒಂದು ವಾರದ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಅತಿ ಭಾರಿ ಮಳೆಯಾಗಲಿದೆ (Karnataka Rains). ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಜೂನ್‌ 2ರವರೆಗೆ, ಉತ್ತರ ಒಳನಾಡಿಗೆ ಮೇ 28 ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಮೇ 30 ರವರೆಗೆ ಭಾರತ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಕರಾವಳಿಯಲ್ಲಿ ಬುಧವಾರ ಗಂಟೆಗೆ 55 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ, ಸಣ್ಣ ಹಡಗುಗಳು ಓಡಾಡದಂತೆ, ತೀರದ ಸಮೀಪ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿ ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಹೆಚ್ಚಿದೆ.

ಮೇ 28ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮೈಸೂರು, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವ ಇದೆ.



ಮೇ 29ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ಗದಗ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮೈಸೂರು, ಚಾಮರಾಜನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಮೇ 30ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮೈಸೂರು, ಚಾಮರಾಜನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ನಿರಂತರ ಗಾಳಿಯೊಂದಿಗೆ ಮಳೆ ಅಬ್ಬರಿಸುವ ಸಾಧ್ಯತೆಯಿದೆ.

ಮೇ 31ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Karnataka Rain: ಮಳೆ ಅನಾಹುತಕ್ಕೆ ನಾಲ್ವರು ಬಲಿ, ಇಂದು 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಜೂನ್‌ 1 ಮತ್ತು 2ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.