Karnataka Weather: ಹವಾಮಾನ ವರದಿ; ಇಂದು ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ
Karnataka Weather: ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ವರುಣ ಅಬ್ಬರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯದಲ್ಲಿ ಮಂಗಳವಾರ ಎಲ್ಲೆಲ್ಲಿ ಮಳೆಯಾಗಲಿದೆ ಎಂಬ ಕುರಿತ ಮಾಹಿತಿ ಇಲ್ಲಿ ನೀಡಲಾಗಿದೆ.


ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೆ ಜೂನ್ 29ರವರೆಗೆ ಗುಡುಗು ಸಹಿತ ಬಿರುಸಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಜೂನ್ 24ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ರಾಮನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಜೂನ್ 25ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಧ್ಯಮ ಮಳೆ/ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಹಾಸನ, ಚಾಮರಾಜನಗರ, ಕೊಡಗು, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ವಿಜಯನಗರ, ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) June 23, 2025
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಹಾಗೂ ಅಲ್ಲಲ್ಲಿ ಭಾರಿ ಮಳೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. pic.twitter.com/mNVvlxQ244
ಜೂನ್ 26ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಮೈಸೂರು, ಹಾಸನ, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ವಿಜಯನಗರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ಫಲವಂತಿಕೆ ಹೆಚ್ಚಿಸಲು ಯೋಗ ನೆರವಾಗಬಲ್ಲದು; ಗೊತ್ತೇ?
ಜೂನ್ 27 ಮತ್ತು 28ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಹಾವೇರಿ, ಕೊಪ್ಪಳ, ಬೀದರ್, ರಾಯಚೂರು, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಮೈಸೂರು, ಹಾಸನ, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ವಿಜಯನಗರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.