Karnataka Rains: ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮುಂಗಾರು ಪೂರ್ವ ಮಳೆ; ಯೆಲ್ಲೋ ಅಲರ್ಟ್ ಘೋಷಣೆ
Karnataka Rains: ಕಲಬುರಗಿಯಲ್ಲಿ ಶನಿವಾರ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ 41.2 ಡಿ.ಸೆ ದಾಖಲಾಗಿದೆ. ಇನ್ನು ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ನಂತರ 2 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಬಳಿಕ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಬೆಂಗಳೂರು: ರಾಜ್ಯದಲ್ಲಿ ಇನ್ನಷ್ಟು ದಿನ ಪೂರ್ವ ಮುಂಗಾರು ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ (Karnataka Rains) ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಏಪ್ರಿಲ್ 23ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವರುಣ ಆರ್ಭಟಿಸಲಿದ್ದಾನೆ. ಇನ್ನು ಭಾನುವಾರ ರಾತ್ರಿ ಕೂಡ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಸೇರಿ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ (Heavy Rain) ಸಾಧ್ಯತೆ ಇದೆ.
ವಾಯುಭಾರ ಕುಸಿತವು ಸದ್ಯ ಈಶಾನ್ಯ ಮಧ್ಯಪ್ರದೇಶದಿಂದ ವಿದರ್ಭ, ತೆಲಂಗಾಣ, ಕರ್ನಾಟಕದ ಒಳನಾಡು ಮತ್ತು ತಮಿಳುನಾಡಿನ ಮೂಲಕ ಮನ್ನಾರ್ ಕೊಲ್ಲಿಯವರೆಗೆ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಸಾಗುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 22°C ಇರುವ ಸಾಧ್ಯತೆ ಇದೆ.
ಮುಂದಿನ 5 ದಿನಗಳ #ಹವಾಮಾನ #ಮುನ್ಸೂಚನೆ & #ಎಚ್ಚರಿಕೆಗಳು:(ಮೂಲ:IMD)
— Karnataka State Natural Disaster Monitoring Centre (@KarnatakaSNDMC) April 20, 2025
ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಗುಡುಗು, ಮಿಂಚು & ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾದ್ಯತೆಯಿದ್ದು, ಕರಾವಳಿ, ಮಲೆನಾಡು & ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. pic.twitter.com/Z6jLqVBboc
ಏಪ್ರಿಲ್ 21ರಂದು ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಏ.22ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಏ.23ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಏ. 24ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮಂಡ್ಯ, ತುಮಕೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health: ವರ್ಟಿಗೋ ಅಥವಾ “ಚಕ್ಕರ್” ಕುರಿತು ತಿಳಿಯಬೇಕೇ? ಈ ಒಳನೋಟಪೂರ್ಣ ಅಧ್ಯಯನ ವರದಿ ಓದಿ!
ಏ. 25 ಮತ್ತು 26ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.