ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ಇಂದಿನ ಹವಾಮಾನ; ಬಾಗಲಕೋಟೆ, ಬೆಳಗಾವಿ ಸೇರಿ ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ° C ಮತ್ತು 23 ° C ಇರಬಹುದು ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಬಾಗಲಕೋಟೆ, ಬೆಳಗಾವಿ ಸೇರಿ ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆ!

Profile Prabhakara R Apr 26, 2025 6:00 AM

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ (ಮೇ 1ರವರೆಗೆ) ಉತ್ತಮ ಮಳೆಯಾಗುವ (Karnataka Rains) ಮುನ್ಸೂಚನೆ ಸಿಕ್ಕಿದೆ. ಇನ್ನು ಏಪ್ರಿಲ್‌ 26ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಮತ್ತು ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ° C ಮತ್ತು 23 ° C ಆಗಿರಬಹುದು.

ಏಪ್ರಿಲ್‌ 27ರಂದು ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬಾಗಲಕೋಟೆ, ಬೆಳಗಾವಿ ಸೇರಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ.

ಏಪ್ರಿಲ್‌ 28ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್, ಹಾವೇರಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಏಪ್ರಿಲ್‌ 29ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಯಾದಗಿರಿ, ಗದಗ, ಕೊಪ್ಪಳ, ಹಾವೇರಿ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಏಪ್ರಿಲ್‌ 30ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಗದಗ, ಕೊಪ್ಪಳ, ಹಾವೇರಿ, ಧಾರವಾಡ, ರಾಯಚೂರು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಮೈಸೂರು, ಚಿಕ್ಕಮಗಳೂರು, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ಕಲ್ಲಂಗಡಿಯೆಂಬ ರಸಭರಿತ ಹಣ್ಣಿನ ಸತ್ವಗಳು ಗೊತ್ತೇ?

ಮೇ 1ರಂದು ಕರಾವಳಿಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಾವೇರಿ, ಗದಗ, ಕೊಪ್ಪಳ, ಬೆಳಗಾವಿ , ಧಾರವಾಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮಂಡ್ಯ, ಚಾಮರಾಜನಗರ, ರಾಮನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.