Karnataka Rain: ಇಂದು ಬೆಂಗಳೂರು, ಕೊಡಗು ಸೇರಿ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!
Karnataka Rain: ಮುಂದಿನ 5 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ 2-4°C ಏರಿಕೆಯ ಸಾಧ್ಯತೆಯಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆಯ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಬುಧವಾರ ರಾತ್ರಿ ವರುಣ ಅಬ್ಬರಿಸಿದ್ದಾನೆ. ಅದೇ ರೀತಿ ಮುಂದಿನ 5 ದಿನಗಳ ಕಾಲ ಬೆಂಗಳೂರು, ಮೈಸೂರು, ಕೊಡಗು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Karnataka Rain) ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ನೀಡಿದೆ. ಏ.17ರಂದು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ 40-50 ಕಿ.ಮೀ. ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 ° C ಮತ್ತು 21 ° C ಇರಬಹುದು.
ಇನ್ನು ಏ.18ರಂದು ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.
ಏ. 19ರಂದು ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಏ.20ರಂದು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ. ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಈ ಸುದ್ದಿಯನ್ನೂ ಓದಿ | Bengaluru Rain: ರಾಜಧಾನಿಯಲ್ಲಿ ಮುಂದುವರಿದ ಮಳೆಯಾರ್ಭಟ; ರಸ್ತೆಗಳು ಜಲಾವೃತ, ವಾಹನ ಸವಾರರು ಹೈರಾಣ
ಏ.21 ಮತ್ತು 22ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ. ಕರ್ನಾಟಕದ ಉತ್ತರ ಒಳನಾಡು: ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.