Karnataka Rains: ಮುಂದಿನ 4 ದಿನ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ; ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್
Karnataka Rains: ಮುಂದಿನ 3 ದಿನಗಳವರೆಗೆ ರಾಜ್ಯದ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ. ನಂತರ ಯಾವುದೇ ದೊಡ್ಡ ಬದಲಾವಣೆ ಇಲ್ಲ. ಮುಂದಿನ 5 ದಿನಗಳವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.


ಬೆಂಗಳೂರು: ರಾಜ್ಯದ ಹಲೆವೆಡೆ ಬೇಸಿಗೆಯ ನಡುವೆ ವರುಣ ಆರ್ಭಟಿಸುತ್ತಿದ್ದಾನೆ. ಅದೇ ರೀತಿ ಮುಂದಿನ ನಾಲ್ಕು ದಿನಗಳ ಕಾಲ ಮಳೆರಾಯ ( Heavy Rain) ಅಬ್ಬರಿಸುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆಯು ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್ ಹಾಗೂ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Karnataka Rains) ಸಾಧ್ಯತೆಯಿದೆ.
ಇನ್ನು ಮೇ 2ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಇಲಾಖೆ ತಿಳಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 21°C ಇರುವ ಸಾಧ್ಯತೆ ಇದೆ.
ಮುಂದಿನ 5 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) May 1, 2025
ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. pic.twitter.com/aZIlEazxsh
ಮೇ 3ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆ ಹಾಗೂ ಬೆಂಗಳೂರು ಸೇರಿ ದಕ್ಷಿಣ ಒಳನಾಡಿ ಎಲ್ಲಾ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮೇ 4ರಂದು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆ ಮಳೆಯಾಗುವ ಸಾಧ್ಯತೆ ಇದೆ.
ಮೇ 5ರಂದು ದಕ್ಷಿಣ ಕನ್ನಡ, ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ರಾತ್ರಿ ಇಡೀ ಏಸಿಯಲ್ಲೇ ಮಲಗುತ್ತೀರಾ? ಇದನ್ನೊಮ್ಮೆ ಓದಿ
ಮೇ 6 ಮತ್ತು 7ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.