ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka weather: ನಾಳೆ ಬೆಂಗಳೂರು, ಮಂಡ್ಯ ಸೇರಿ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka weather: ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ನಂತರದ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಏರಿಕೆ ಇರುವ ಸಾಧ್ಯತೆ ಇದೆ.

ನಾಳೆ ಬೆಂಗಳೂರು, ಮಂಡ್ಯ ಸೇರಿ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Profile Prabhakara R Apr 19, 2025 7:18 PM

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆ ಸುರಿದಿದೆ. ಅದೇ ರೀತಿ ಶನಿವಾರ ರಾತ್ರಿ ಕೂಡ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆಯ ಒಂದು ಅಥವಾ ಎರಡು ಕಡೆ ಸಿಡಿಲು, ಗುಡುಗು ಸಹಿತ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Karnataka weather) ನೀಡಿದೆ.

ಇನ್ನು ಉತ್ತರ ಮಧ್ಯ ಮಹಾರಾಷ್ಟ್ರದಿಂದ ಮನ್ನಾರ್ ಕೊಲ್ಲಿಯವರೆಗೆ ಇರುವ ವಾಯುಭಾರ ಕುಸಿತವು ಸದ್ಯ ಈಶಾನ್ಯ ವಿದರ್ಭದಿಂದ ಮನ್ನಾರ್ ಕೊಲ್ಲಿಯವರೆಗೆ ತೆಲಂಗಾಣ, ಕರ್ನಾಟಕದ ಒಳನಾಡು, ರಾಯಲಸೀಮಾ ಮತ್ತು ತಮಿಳುನಾಡಿನಾದ್ಯಂತ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಸಾಗುತ್ತಿದೆ ಎಂದು ಮಾಹಿತಿ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 22°C ಇರುವ ಸಾಧ್ಯತೆ ಇದೆ.

ಏಪ್ರಿಲ್‌ 20ರಂದು ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮಂಡ್ಯ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಏ.21ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಏ.22ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಏ.23ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

ಏ.24ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮೈಸೂರು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Healthy Food: ಹಸಿ ತರಕಾರಿ ಅಥವಾ ಬೇಯಿಸಿದ ತರಕಾರಿ! ಯಾವುದು ಆರೋಗ್ಯಕ್ಕೆ ಉತ್ತಮ?

ಏ. 25ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೊಪ್ಪಳ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ / ಗುಡುಗು ಸಹಿತ ಮಳೆ ಸಾಧ್ಯತೆ ಇದೆ.