KPCL Recruitment: ಕೆಪಿಸಿಎಲ್ ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದು; ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ
KPCL Recruitment: ಕೆಪಿಸಿಎಲ್ ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿಯನ್ನು ರದ್ದುಗೊಳಿಸಿ, ಮರು ಪರೀಕ್ಷೆಗೆ ಹೈಕೋರ್ಟ್ ನಿರ್ದೇಶಿಸಿದೆ. 2024ರ ಫೆಬ್ರವರಿ 18ರಂದು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಕೆಪಿಸಿಎಲ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ.


ಬೆಂಗಳೂರು: ಕೆಪಿಸಿಎಲ್ ಎಇ, ಜೆಇ ಹುದ್ದೆಗಳ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ, ಮರು ಪರೀಕ್ಷೆಗೆ ಹೈಕೋರ್ಟ್ ಆದೇಶಿಸಿದೆ. 2024ರ ಮೇ 8ರಂದು ಆಯ್ಕೆ ಪಟ್ಟಿ (KPCL Recruitment) ಪ್ರಕಟಿಸಲಾಗಿತ್ತು. ಅದರೆ, ನೆಗೆಟಿವ್ ಮಾರ್ಕಿಂಗ್ ಪ್ರಶ್ನಿಸಿ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ, ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರಿದ್ದ ಪೀಠವು ವಿಚಾರಣೆ ನಡೆಸಿ, ಈ ಆದೇಶ ಮಾಡಿದೆ.
2024ರ ಫೆಬ್ರವರಿ 18ರಂದು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಕೆಪಿಸಿಎಲ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಅಲ್ಲದೇ ನೆಗೆಟಿವ್ ಮಾರ್ಕಿಂಗ್ ಬಗ್ಗೆ ಪೂರ್ವ ಮಾಹಿತಿ ನೀಡಲು ಸೂಚಿಸಿದೆ.