Mangalore Murder Case: ಮಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ
Mangalore Murder Case: ಮಂಗಳೂರಿನಲ್ಲಿ ಕಾರು ಅಡ್ಡಗಟ್ಟಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆ ಮಾಡಲಾಗಿದೆ. ಫಾಜಿಲ್ ಕೊಲೆಗೆ ಪ್ರತೀಕಾರವಾಗಿ ಸುಹಾಸ್ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ. ಎ.ಜೆ.ಆಸ್ಪತ್ರೆ ಎದುರು ನೂರಾರು ಹಿಂದೂ ಕಾರ್ಯಕರ್ತರು ಜಮಾಯಿಸಿದ್ದು, ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ

ಮಂಗಳೂರು: ನಗರದಲ್ಲಿ ಗುರುವಾರ ರಾತ್ರಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ (Mangalore Murder Case) ನಡೆದಿದೆ. ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ (Suhas Shetty) ಕೊಲೆಯಾದ ವ್ಯಕ್ತಿ. ಮಂಗಳೂರಿನ ಬಜಪೆ ಕಿನ್ನಿಪದವು ಬಳಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ತಲ್ವಾರ್‌ಗಳಿಂದ ಹಲ್ಲೆ ನಡೆಸಿದ್ದರಿಂದ ಸುಹಾಸ್ ಶೆಟ್ಟಿ ಮೃತಪಟ್ಟಿದ್ದಾನೆ.
ಕಾರು ಅಡ್ಡಗಟ್ಟಿ ಸುಹಾಸ್ ಶೆಟ್ಟಿಯ ಕೊಲೆ ಮಾಡಲಾಗಿದೆ. 2022ರಲ್ಲಿ ನಡೆದಿದ್ದ ಫಾಜಿಲ್ ಕೊಲೆಗೆ ಪ್ರತೀಕಾರವಾಗಿ ಸುಹಾಸ್ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ. ಎ.ಜೆ.ಆಸ್ಪತ್ರೆ ಎದುರು ನೂರಾರು ಹಿಂದೂ ಕಾರ್ಯಕರ್ತರು ಜಮಾಯಿಸಿದ್ದು, ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗೆ ರಾಜ್ಯ ಬಿಜೆಪಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ ಮತ್ತಿತರ ನಾಯಕರು ಆಗಮಿಸಿ ಮಾಹಿತಿ ಪಡೆಯುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು 2022ರಲ್ಲಿ ಜುಲೈ 26ರಂದು ರಾತ್ರಿ ಬೈಕಿನಲ್ಲಿ ಬಂದ ಇನ್ನೊಂದು ಕೋಮಿಗೆ ಸೇರಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೈಗೈದಿದ್ದರು. ಪ್ರವೀಣ್ ಹತ್ಯೆಗೆ ಪ್ರತೀಕಾರವಾಗಿ 2022ರಲ್ಲಿ ಸುರತ್ಕಲ್‌ನ ಫಾಜಿಲ್ ಎಂಬವನ ಹತ್ಯೆ ಮಾಡಲಾಗಿತ್ತು. ಬಜ್ಪೆ ಠಾಣೆಯಲ್ಲಿ ರೌಡಿಶೀಟರ್‌ಗಳಾಗಿದ್ದ ಸುಹಾಸ್ ಶೆಟ್ಟಿ ಬಗ್ಗೆ ಹಾಗೂ ಅಭಿಷೇಕ್ ಈ ಹತ್ಯೆಯ ಸೂತ್ರಧಾರಿಗಳು ಎಂಬ ಆರೋಪವಿದೆ.
ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದ. ಹತ್ಯೆ ಪ್ರಕರಣದಲ್ಲಿ ಭಾಗಿಯಾದ ನಂತರ ಯಾವುದೇ ಜವಾಬ್ದಾರಿ ಇರಲಿಲ್ಲ. ಹಲವು ಕೊಲೆ, ಕೊಲೆಯತ್ನ ಪ್ರಕರಣದ ಆರೋಪಿಯಾಗಿದ್ದ ಈತ, ಫಾಜಿಲ್ ಹತ್ಯೆ ಕೇಸ್‌ನಲ್ಲಿ ಜಾಮೀನಿನ ಮೇರೆಗೆ ಜೈಲಿನಿಂದ ಹೊರಗೆ ಬಂದಿದ್ದ. ಆದರೆ, ಇಂದು ಹಲ್ಲೆ ಬಳಿಕ ಗಂಭೀರ ಸ್ಥಿತಿಯಲ್ಲಿದ್ದ ಸುಹಾಸ್‌ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಾಗಿತ್ತು. ತಲ್ವಾರ್ ದಾಳಿಗೆ ತುತ್ತಾಗಿ ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೇ ಸುಹಾಸ್ ಸಾವಿಗೀಡಾಗಿದ್ದಾನೆ.
ಈ ಸುದ್ದಿಯನ್ನೂ ಓದಿ | Physical abuse: ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ; ಸ್ನೇಹಿತರಿಂದಲೇ ಹೀನ ಕೃತ್ಯ!